ಪತ್ರಕರ್ತ ಮೊಹಮ್ಮದ್ ಅಖೀಲ್ ಉಡೇವುಗೆ ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿ ಪ್ರಧಾನ
ಕೊಪ್ಪಳ 04 :ಛಿ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2023 ಮತ್ತು 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.ಈ ಸಮಾರಂಭದಲ್ಲಿ ಕೊಪ್ಪಳ ಜಿಲ್ಲೆಯ ವಾರ್ತಾಭಾತಿ ಪತ್ರಿಕೆಯ ಜಿಲ್ಲಾ ವರದಿಗಾರ ಮೊಹಮ್ಮದ್ ಅಖೀಲ್ ಉಡೇವು ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ 2024ನೇ ಸಾಲಿನ ಶೋಷಣೆಯನ್ನು ಪರಿಣಾಮಕಾರಿಯಾಗಿ ಬಿಂಬಿಸುವ ವರದಿಗೆ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕೊಪ್ಪಳದಲ್ಲಿ ಆಳವಾಗಿ ಬೇರೂರಿದ ಅಸ್ಪೃಶ್ಯೆ ಎಂಬ ವರದಿಗೆ ಈ ದತ್ತಿ ಪ್ರಶಸ್ತಿ ಲಭಿಸಿದೆ. ಇದರ ಜೊತೆಗೆ ಹಿರಿಯ ಪತ್ರಕರ್ತ ಸಿರಾಜ್ ಬಿಸರಳ್ಳಿಗೆ ಅವರಿಗೆ ಕೊಪ್ಪಳ ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ಪತ್ರಿಕಾರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಮತ್ತು ಇನ್ನೋರ್ವ ಹಿರಿಯ ಪತ್ರಕರ್ತ ಹೆಚ್.ಎಸ್. ಹರೀಶ್ ಅವರಿಗೂ ವಾರ್ಷಿಕ ಪ್ರಶಸ್ತಿ ಲಭಿಸಿದೆ.