ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ

Judge's visit to Supplemental Nutrition Food Processing Center

ಪೂರಕ ಪೌಷ್ಠಿಕ ಆಹಾರ ತಯಾರಿಕಾ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ 

ಧಾರವಾಡ ಫೆ.24: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್‌.ದೊಡ್ಡಮನಿ ಅವರು (ಫೆ. 21) ರಂದು ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸುವ ಘಟಕಗಳಾದ ಲಕಮನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಂ.ಎಸ್‌.ಪಿ.ಸಿ ಮತ್ತು ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು. ಸರಕಾರದಿಂದ ಬಿಡುಗಡೆಯಾದ ಆಹಾರ ಧಾನ್ಯಗಳ ವಿವರ ಮತ್ತು ಅಂಗನವಾಡಿ ಕೇಂದ್ರಗಳಿಗೆ ಪೂರೈಸಿದ ವಿವರವನ್ನು ನೀಡಲು ಸೂಚಿಸಲಾಯಿತು. ನಂತರ ಉಣಕಲ್ ಕ್ರಾಸಿನಲ್ಲಿರುವ ಸರ್ಕಾರಿ ಬಾಲಕರ ಬಾಲ ಮಂದಿರ, ಮಂದಮತಿ ಅನುಪಾಲನಾ ಸಂಸ್ಥೆ, ಮನೋವಿಕಲ ಬಾಲಕಿಯರ ಸರ್ಕಾರಿ ಬಾಲ ಮಂದಿರ, ಗಂಟೆಕೇರಿ ಬಾಲಕಿಯರ ಸರಕಾರಿ ಬಾಲ ಮಂದಿರ ಹಾಗೂ ಹುಬ್ಬಳ್ಳಿಯ ಉಪ ಕಾರಾಗೃಹಕ್ಕೆ, ರಾಜ್ಯ ಮಹಿಳಾ ನಿಲಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು.