ನವದೆಹಲಿ, ಏ 29 ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅಥರ್ೆಸಿಕೊಂಡು, ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸೋಮವಾರ ಸುಪ್ರೀಂಕೋಟರ್್ ಗೆ ಹೊಸ ಅಫಿಡವಿಟ್ ಸಲ್ಲಿಸಿದ್ದಾರೆ.
ರಫೆಲ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋಟರ್್ ನೀಡಿದ್ದ ಆದೇಶವನ್ನು ಬಳಸಿಕೊಂಡು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಚೌಕಿದಾರ್ ಚೋರ್ ಹೈ' ಎಂದು ಟೀಕಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವುದಾಗಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಕೋಟರ್್ ಮೆಟ್ಟಿಲೇರಿದ್ದರು.
ಈ ಸಂಬಂಧ ಸುಪ್ರೀಂಕೋಟರ್್ ಸೂಚನೆಯಂತೆ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿ, 'ಚೌಕಿದಾರ್ ಚೋರ್ ಹೈ' ಘೊಷಣೆಗೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದರು. ಆದರೆ ಕ್ಷಮೆ ಕೋರಿರಲಿಲ್ಲ. ಮತ್ತು ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದರು.
ಆದರೆ ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಕೈಬಿಡಬೇಕೆಂಬ ರಾಹುಲ್ ಗಾಂಧಿ ಮನವಿಯನ್ನು ಸುಪ್ರೀಂಕೋಟರ್್ ತಳ್ಳಿಹಾಕಿತ್ತು. ಈ ವಿವಾದಕ್ಕೆ ಸಂಬಂಧಿಸಿದ ಅಜರ್ಿ ವಿಚಾರಣೆ ನಾಳೆ ಏಪ್ರಿಲ್ 30ರಂದು ನಡೆಯಲಿದೆ.