ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಕೆ.ಚಂದ್ರಶೇಖರ ಪ್ರಥಮ
ಹಾವೇರಿ 13: ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಜರುಗಿದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಲ್ಲಿ ಓಪನ್ ಸಿಂಗಲ್ಸ್ ಸೇರಿದಂತೆ ಭಾಗವಹಿಸಿದ ಮೂರೂ ಬ್ಯಾಡ್ಮಿಂಟನ್ ವಿಭಾಗಗಳಲ್ಲಿ ಅಬಕಾರಿ ಇಲಾಖೆಯ ಕೆ. ಚಂದ್ರಶೇಖರ ಅವರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ಕೆ.ಚಂದ್ರಶೇಖರ ಅವರಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ, ಅಬಕಾರಿ ಉಪ ಆಯುಕ್ತರಾದ ಶೈಲಜಾ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯಾ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ ಅವರುಗಳು ಶುಭ ಕೋರಿದ್ದಾರೆ.