ಕೆ-ಸೆಟ್ ಪರೀಕ್ಷೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
K-SET exam: Outstanding performance of government first-class college students
ಮೂಡಲಗಿ 27: ಇತ್ತೀಚೆಗೆ ಕರ್ನಾಟಕ ಸರ್ಕಾರ ನಡೆಸಿದ್ದ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 07 ಜನ ಹಳೆಯ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ. ಮಹಾವಿದ್ಯಾಲಯದ ಶಿಲ್ಪಾ ಉಪ್ಪಿನ (ಸಮಾಜಕಾರ್ಯ), ಸ್ನೇಹಾ ಹೇಳವರ (ಭೌತಶಾಸ್ತ್ರ), ಅಪರ್ಣಾ ಸಣ್ಣಕ್ಕಿ, ವಿದ್ಯಾಶ್ರೀ ಹಂಜಿ, ಶ್ರೀಶೈಲ ಸಂಕಾನಟ್ಟಿ (ಮೂವರು ಅರ್ಥಶಾಸ್ತ್ರ), ಈರಣ್ಣ ತುಕ್ಕನ್ನವರ (ಭೂಗೋಳಶಾಸ್ತ್ರ) ಹಾಗೂ ಯಮನಪ್ಪ ಕೇರಿ (ರಾಜ್ಯಶಾಸ್ತ್ರ) ಅವರು ಉತ್ತೀರ್ಣರಾದ ವಿದ್ಯಾರ್ಥಿಗಳು. ಸಾಧಕರಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸರ್ವ ಸದಸ್ಯರು, ಪ್ರಾಂಶುಪಾಲ ಮಹೇಶ ಕಂಬಾರ, ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 