ಸ್ಮಾರ್ಟ್ ಕಾರ್ಡ್ ಹೆಸರಿನಲ್ಲಿ ಶಕ್ತಿ ಯೋಜನೆ ದುರ್ಬಲಗೊಳಿಸುವ ಹುನ್ನಾರವನ್ನು ಕೆಬಿಡಿ - ಎ ಐ ಎಂ ಎಸ್ ಎಸ್ ಆಗ್ರಹ
KBD - AIMSS urges action against attempt to weaken Shakti Yojana in the name of smart cards
ಕೊಪ್ಪಳ 20: ಸ್ಮಾರ್ಟ್ ಕಾರ್ಡ್ ಹೆಸರಿನಲ್ಲಿ ಶಕ್ತಿ ಯೋಜನೆ ದುರ್ಬಲಗೊಳಿಸುವ ಹುನ್ನಾರವನ್ನು ಕೈಬಿಡಿ - ಎ ಐ ಎಂ ಎಸ್ ಎಸ್ ಆಗ್ರಹ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಆದಾಯ ಮತ್ತು ಉಳಿತಾಯ ಹೆಚ್ಚಾಗಿದೆ. ಆಧಾರ್ ಕಾರ್ಡ್ ತೋರಿಸಿ ಈ ರಾಜ್ಯದ ಪ್ರಜೆ ಎಂದು ಖಾತ್ರಿಪಡಿಸಿದರೆ ಸಾಕು ರಾಜ್ಯದ ಎಲ್ಲಾ ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆಯಬಹುದು ಎಂಬುದು ನಿಯಮವಾಗಿದೆ. ಆದರೆ ರಾಜ್ಯ ಸರ್ಕಾರ ಈಗ ವಿತರಿಸಲು ವಿತರಿಸಲು ಹೊರಟಿರುವ ಸ್ಮಾರ್ಟ್ ಕಾರ್ಡ್ ನಿಂದ ಮಹಿಳೆಯರಿಗೆ ಅದರಲ್ಲೂ ಗ್ರಾಮಾಂತರ ಹಾಗೂ ನಗರ ಪ್ರದೇಶದ ಬಡ ಮತ್ತು ಅಶಿಕ್ಷಿತ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವನ್ನು ಕೈತಪ್ಪಿಸುವ ಸಾಧ್ಯತೆಯನ್ನು ಹೊಂದಿದೆ. ಹಾಗೆಯೇ ಭ್ರಷ್ಟರಿಗೆ ದುಡ್ಡು ಮಾಡಲು ಅವಕಾಶ ಕಲ್ಪಿಸಿದಂತಾಗುತ್ತದೆ.
ಈ ಕಾರ್ಡಿನಲ್ಲಿ ಪ್ರಯಾಣಿಕರ ಮಾಹಿತಿ ಇರುವ ಚಿಪ್ಪು ಇರುತ್ತದೆ, ಇದರಿಂದ ಶಕ್ತಿ ಯೋಜನೆಯಡಿ ಪ್ರಯಾಣಿಸಿದವರಲ್ಲಿ ಮಕ್ಕಳೆಷ್ಟು, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ, ಸಾಮಾನ್ಯ ವರ್ಗದ ಮಹಿಳೆಯರು ಎಷ್ಟು ಎಂಬ ನಿಖರ ಮಾಹಿತಿ ದೊರೆಯುತ್ತದೆ ಎಂದು ಸಮರ್ಥಿಸಿಕೊಳ್ಳಲಾಗುತ್ತಿದೆ. ಹೀಗಾದರೆ ರಾಜ್ಯದ ಮಹಿಳೆಯರಿಗೆ ಯಾವುದೇ ರೀತಿಯ ವರ್ಗ, ಶ್ರೇಣಿಯನ್ನು ನೋಡದೆ ಘೋಷಿಸಿರುವ ಈ ಯೋಜನೆಯನ್ನು ಸ್ಮಾರ್ಟ್ ಕಾರ್ಡ್ ಹೆಸರಿನಲ್ಲಿ ಕುಚೇಷ್ಟೆ ಮಾಡಿದಂತಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಈ ಕೂಡಲೇ ಸ್ಮಾರ್ಟ್ ಕಾರ್ಡ್ ವಿತರಿಸುವ ಕೆಲಸವನ್ನು ಕೈಬಿಡಬೇಕು, ರಾಜ್ಯದ ಎಲ್ಲಾ ಮಹಿಳೆಯರಿಗೂ ಈ ಮೊದಲಿನಂತೆಯೇ ಪ್ರಯೋಜನ ಪಡೆಯಲು ಅವಕಾಶ ಮಾಡಿಕೊಡಬೇಕು ಎಂದು ಎಐಎಂಎಸ್‌ಎಸ್ ಕೊಪ್ಪಳ ಜಿಲ್ಲಾ ಸಂಘಟನಾ ಸಮಿತಿಯು ಮನವಿ ಮಾಡುತ್ತದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 