‘ಕೆಡಿ’ಯ ಮೊದಲ ಹಾಡು ‘ಶಿವ ಶಿವ ...’ಗೆ ಅಭಿಮಾನಿಗಳು ಫಿದಾ
ಸಾಕಷ್ಟು ನೀರೀಕ್ಷೆಗಳನ್ನು ಹುಟ್ಟು ಹಾಕಿರುವ ‘ಕೆಡಿ’ ಚಿತ್ರದ ಮೊದಲ ಹಾಡು ‘ಶಿವ ಶಿವ ...’ ಇತ್ತೀಚೆಗೆ ಬಿಡುಗಡೆಯಾಗಿ ಜಾಲತಾಣದಲ್ಲಿ ಪ್ರಶಂಸೆ ಪಡೆದು ಟ್ರೆಂಡಿಂಗ್‌ನಲ್ಲಿ ಸೌಂಡ್ ಮಾಡುತ್ತಿದೆ. ‘ಏಕ್ ಲವ್ ಯಾ’ ನಂತರ ಜೋಗಿ ಪ್ರೇಮ್ ನಿರ್ದೇಶನ ಹಾಗೂ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಚಿತ್ರವನ್ನು ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಕೆ.ವಿ.ಎನ್. ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ. ‘ಕೆಡಿ’ ಮಾತಿನ ಭಾಗದ ಚಿತ್ರೀಕರಣ ಮುಗಿದು, 2 ಹಾಡುಗಳ ಶೂಟಿಂಗ್ ಮಾತ್ರವೇ ಬಾಕಿ ಇದೆ. ಮಂಗಳವಾರ ಈ ಚಿತ್ರದ ಮೊದಲ ಹಾಡು, ಜನಪದ ಶೈಲಿಯ ಶಿವ ಶಿವ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಒರಾಯನ್ ಮಾಲ್‌ನಲ್ಲಿ ನೆರವೇರಿತು, ಈ ಹಾಡಿಗೆ ಪ್ರೇಮ್ ಹಾಗೂ ಕೈಲಾಶ್‌ಖೇರ್ ದನಿಯಾಗಿದ್ದು, ಉಳಿದಂತೆ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಅಲ್ಲಿನ ಗಾಯಕರೇ ಹಾಡಿದ್ದಾರೆ.
ಹಾಡು ಬಿಡುಗಡೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಪ್ರೇಮ್ ‘ಹೊಸ ವರ್ಷಕ್ಕೆ ನಮ್ಮ ಚಿತ್ರದ ಮೊದಲ ಹಾಡಾಗಿ ‘ಶಿವ ಶಿವ ...’ ಬರಾ್ತ ಇದೆ. ಕೆಡಿ ಅಂದ್ರೆ ಕಾಳಿದಾಸ. 70ರ ದಶಕದಲ್ಲಿದ್ದ ಜನಪ್ರಿಯ ಜನಪದ ಹಾಡಿನ ಸಾಲನ್ನಿಟ್ಟುಕೊಂಡು ಮಾಡಿದ ಸಾಂಗ್ ಇದು. ಈ ಹಾಡನ್ನು 5 ಭಾಷೆಯಲ್ಲೂ ಬಿಡುಗಡೆ ಮಾಡಿದ್ದೇವೆ. ಹಿಂದಿ ಸಾಂಗನ್ನು ಅಜಯ್ ದೇವಗನ್, ತೆಲುಗು ಸಾಂಗನ್ನು ಹರೀಶ್ ಶಂಕರ್ ಹಾಗೂ ತಮಿಳು ಸಾಂಗನ್ನು ಲೋಕೇಶ್ ಕನಕರಾಜು ರೀಲೀಸ್ ಮಾಡಿದ್ದಾರೆ. ಪೂರ್ತಿ ಹಾಡನ್ನು ಇನ್ನೂ ಬಿಟ್ಟಿಲ್ಲ. ಫುಲ್ ಸಾಂಗ್ ಬೇರೆಯದೇ ಲೆವೆಲ್‌ನಲ್ಲಿದೆ. 1970ರ ಕಾಲಮಾನವನ್ನು ತೋರಿಸೋದು ಅಷ್ಟು ಸುಲಭವಲ್ಲ. ಆಗ ಬೆಂಗಳೂರು ಹೇಗಿತ್ತು ಅಂತ ಮೋಹನ್ ಬಿ.ಕೆರೆ ಅವರು ಅದ್ಭುತ ಸೆಟ್ ಹಾಕಿದ್ದರು. ಚಿತ್ರದಲ್ಲಿ ಒಟ್ಟು 6 ಹಾಡುಗಳಿದ್ದು, ಮುಂದೆ ಬರೋ ಸಾಂಗ್ ಎಲ್ಲಾ ಯೂನಿಕ್ ಆಗಿರುತ್ತವೆ. ಇವತ್ತಿನವರೆಗೂ ನೋಡಿರದ ರೀಶ್ಮಾ ಅವರನ್ನು ಈ ಚಿತ್ರದಲ್ಲಿ ಕಾಣಬಹುದು. ಆಕೆ ಉತ್ತಮ ಪರ್ ಫಾರ್ಮರ್. ಇನ್ನು ಧ್ರುವ ನನ್ನ ಬ್ರದರ್ ಇದ್ದಹಾಗೆ, ಕಾಳಿದಾಸ ಎಷ್ಟು ಇನ್ನೋಸೆಂಟೋ, ಅಷ್ಟೇ ರಾ ಆಗಿರುತ್ತಾನೆ. ಆ ಪಾತ್ರವನ್ನು ಧ್ರುವ ರಿಯಲಿಸ್ಟಿಕ್ ಆಗಿ ಮಾಡಿದ್ದಾರೆ. ಈತನನ್ನು ಶಿವಣ್ಣ, ಅಪ್ಪು ಸರ್‌ಗೆ ಹೋಲಿಸುತ್ತೇನೆ. ಏಕೆಂದರೆ ಅಷ್ಟು ಎನರ್ಜಿ ಈತನಲ್ಲಿದೆ. ಚಲಿಸುವ ಕಾರ್ ಮೇಲೆ ನಿಂತು ಡ್ಯಾನ್ಸ್ ಮಾಡಿದ್ದಾನೆ. ನನ್ನ ಸಿನಿಮಾದ ಫಸ್ಟ್ ಹೀರೋನೇ ಮ್ಯೂಸಿಕ್. ನನ್ನ ಕಾಟವನ್ನು ತಡೆದುಕೊಂಡು ಅರ್ಜುನ್ ಜನ್ಯ ಅದ್ಭುತವಾದ ಮ್ಯೂಸಿಕ್ ಮಾಡಿಕೊಟ್ಟಿದ್ದಾರೆ. ಕೆವಿಎನ್ ಸಂಸ್ಥೆ ನನಗೆ ಈವೆಗೂ ಯಾವುದಕ್ಕೂ ಕೊರತೆ ಮಾಡಿಲ್ಲ. ಸುಪ್ರೀತ್ ನಮ್ಮ ಫ್ಯಾಮಿಲಿ ಇದ್ದಹಾಗೆ. ಬರೋ ದಿನಗಳಲ್ಲಿ ಮುಂಬೈನಲ್ಲಿ ಚಿತ್ರದ ಟೀಸರ್ ರೀಲೀಸ್ ಮಾಡುವ ಪ್ಲಾನ್ ಕೂಡ ಇದೆ’ ಎಂದು ಚಿತ್ರದ ಬಗ್ಗೆ ಸಂಪೂರ್ಣ ವಿವರಣೆ ನೀಡಿದರು.
ನಾಯಕ ಧ್ರುವ ಮಾತನಾಡಿ, ‘ಈ ಹಾಡು ಬರಲು ಮುಖ್ಯ ಕಾರಣ ಪ್ರೇಮ್. ಅರ್ಜುನ್ ಜನ್ಯ ಅವರು ಕಂಪೋಜ್ ಮಾಡಿರುವ ಸ್ಟೈಲ್ ತುಂಬಾ ಚೆನ್ನಾಗಿತ್ತು. ಜನ್ಯ ಅವರ ಜತೆ ಫಸ್ಟ್ ಟೈಮ್ ನಾನು ವರ್ಕ್ ಮಾಡಿರೋದು. ನಿರ್ಮಾಪಕ ವೆಂಕಟ್ ಅವರು ಫೋಕ್ ಸಾಂಗ್ ಬೇಕು ಎಂದು ಹೇಳಿದ್ದರು, ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ, ಅದ್ದೂರಿ, ಬಹದ್ದೂರ್ ಚಿತ್ರಗಳ ನಂತರ ಮತ್ತೊಂದು ಮುದ್ಧತೆ ಕ್ಯಾರಿ ಆಗಿರೋ ಪಾತ್ರ ನನ್ನದು’ ಎಂದು ಹೇಳಿದರು. ನಿರ್ಮಾಪಕ ಸುಪ್ರೀತ್ ಮಾತನಾಡುತ್ತ ‘ಕೆಡಿ ಚಿತ್ರದಲ್ಲಿ ಆಡಿಯೋ ಮುಖ್ಯಪಾತ್ರ ವಹಿಸುತ್ತದೆ. ಚಿತ್ರಕ್ಕಾಗಿ ಪ್ರತಿಯೊಬ್ಬರೂ ತುಂಬಾ ಶ್ರಮ ಹಾಕಿದ್ದಾರೆ’ ಎಂದರು. ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ನಾಯಕಿ ರೀಶ್ಮಾ ನಾಣಯ್ಯ, ಆನಂದ್ ಆಡಿಯೋದ ಶ್ಯಾಮ್, ನೃತ್ಯ ನಿರ್ದೇಶಕ ಮೋಹನ್, ಛಾಯಾಗ್ರಾಹಕ ಡೇವಿಡ್, ಸಾಹಿತಿ ಮಂಜುನಾಥ್ ಬಿ.ಎಸ್. ತಂತಮ್ಮ ಕೆಲಸಗಳ ಬಗ್ಗೆ ವಿವರಿಸಿದರು. ಪ್ಯಾನ್ ಇಂಡಿಯಾ ‘ಕೆಡಿ’ ಚಿತ್ರದಲ್ಲಿ ಬಾಲಿವುಡ್‌ನ ಸಂಜಯ್‌ದತ್, ಶಿಲ್ಪಾ ಶೆಟ್ಟಿ ಪ್ರಮುಖ ಪಾತ್ರದಲ್ಲಿದ್ದಾರೆ.