ಭಾರತ್ ಜೋಡೋ ಭವನದಲ್ಲಿ ಕೆಪಿಸಿಸಿ ವಿಚಾರ ಸಂಕಿರಣ

ಭಾರತ್ ಜೋಡೋ ಭವನದಲ್ಲಿ ಕೆಪಿಸಿಸಿ ವಿಚಾರ ಸಂಕಿರಣ  KPCC symposium at Bharat Jodo Bhavan

ಗದಗ   29: ಬೆಂಗಳೂರಿನ ಕೆಪಿಸಿಸಿಯ “ಭಾರತ್ ಜೋಡೋ ಭವನ"ದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ವತಿಯಿಂದ ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯಕುಮಾರ ಸೊರಕೆ ಅವರ ನೇತೃತ್ವದಲ್ಲಿ 01-07-2026ರಂದು ಬೆಳಿಗ್ಗೆ 10.30ಕ್ಕೆ ಒಂದು ದಿನದ ವಿಚಾರ ಸಂಕೀರಣ ಜರುಗಲಿದೆ. ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಪದಾಧಿಕಾರಿಗಳ, ಪ್ರಚಾರ ಸಮಿತಿಯ ಜಿಲ್ಲಾ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಸಂಯೋಜಕರು, ಪ್ರಚಾರ ಸಮಿತಿಯ ಬ್ಲಾಕ್ ಅಧ್ಯಕ್ಷರುಗಳು ಹಾಗೂ ಉಪಾಧ್ಯಕ್ಷರಿಗೆ ಮುಂಬರುವ ಚುನಾವಣಾ ದೃಷ್ಟಿಯಿಂದ ಮಹತ್ವದ ವಿಚಾರ ಸಂಕೀರಣ ನಡೆಯಲಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಸಹ-ಅಧ್ಯಕ್ಷ ಎಲ್‌. ಹನುಮಂತಯ್ಯನವರು ಭಾಗವಹಿಸಲಿದ್ದಾರೆ.ಆದ್ದರಿಂದ ವಿಚಾರ ಸಂಕೀರಣದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್  ಪ್ರಚಾರ ಸಮಿತಿಯ ಪದಾಧಿಕಾರಿಗಳು ಹಾಗೂ ಗದಗ ಜಿಲ್ಲೆಯ ಎಲ್ಲ ಬ್ಲಾಕ್‌ನ ಪ್ರಚಾರ ಸಮಿತಿಯ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.