ಕೆ.ಎಸ್ ಆಸ್ಪತ್ರೆಯಿಂದ ಅಗಳಕೇರಾ ಸರಕಾರಿ ಶಾಲೆಗೆ ಕ್ರೀಡಾ ಸಾಮಗ್ರಿಗಳ ಕೊಡುಗೆ
KS Hospital donates sports equipment to Agalakera Government School
ಕೊಪ್ಪಳ 14: ಮಕ್ಕಳ ದಿನಾಚರಣೆಯ ಅಂಗವಾಗಿ ನಗರದ ಕೆ.ಎಸ್. ಆಸ್ಪತ್ರೆಯು ತಾಲೂಕಿನ ಅಗಳಕೇರಾ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಲೆಗೆ ಕ್ರೀಡಾ ಸಾಮಗ್ರಿಗಳ ಕಿಟ್ ಅನ್ನು ದಾನವಾಗಿ ನೀಡಿದೆ.ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆಸ್ಪತ್ರೆಯ ಪ್ರತಿನಿಧಿಗಳು, ಮಕ್ಕಳಲ್ಲಿನ ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಈ ಸ್ಪೋರ್ಟ್ಸ ಕಿಟ್ ಸಹಾಯಕವಾಗಲಿದೆ ಎಂದು ತಿಳಿಸಿದರು. ಜೊತೆಗೆ, ಇದೇ ವೇಳೆ ಮಕ್ಕಳ ಪೋಷಕರಿಗೆ ಕೆ.ಎಸ್ ಆಸ್ಪತ್ರೆಯ ವತಿಯಿಂದ ಉಚಿತ ಆರೋಗ್ಯ ಪ್ಯಾಕೇಜ್ ಕೂಪನ್‌ಗಳನ್ನು ವಿತರಿಸಲಾಯಿತು.
ಈ ಪ್ಯಾಕೇಜ್ ಅಡಿಯಲ್ಲಿ ಃಕ, ಗಿಣಚಿ, ಉಖಃಖ, ಇಅಉ ಸೇರಿದಂತೆ ವೈದ್ಯರೊಂದಿಗೆ ಉಚಿತ ಸಮಾಲೋಚನೆ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ನವೆಂಬರ್ 15ರಿಂದ ಡಿಸೆಂಬರ್ 15, 2025 ರವರೆಗೆ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಶಾಲೆಯ ಶಿಕ್ಷಕ ವೃಂದ, ಕೆ ಎಸ್ ಆಸ್ಪತ್ರೆಯ ಸಿಬ್ಬಂದಿ ವರ್ಗ, ಪುಟಾಣಿ ಮಕ್ಕಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಗೆ ಕೆ.ಎಸ್.ಆಸ್ಪತ್ರೆ ವತಿಯಿಂದ ಸ್ಪೋರ್ಟ್ಸ ಕಿಟ್ ಕೊಡುಗೆಯಾಗಿ ನೀಡಲಾಯಿತು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 