ಕೆ.ಎಸ್.ಎಂ.ಸಿ.ಎ ವತಿಯಿಂದ ಬೇಳೂರು ಮತ್ತು ಬೆಳಸೆ ಗ್ರಾಮಗಳು ಸ್ಮಾರ್ಟ್ ವಿಲೇಜ್‌ಗಳಾಗಿ ಅಭಿವೃದ್ಧಿ - ಶಾಸಕ ಸತೀಶ ಸೈಲ್
KSMCA develops Belur and Belase villages into smart villages - MLA Satish Sail
ಕಾರವಾರ, ಫೆ.19:- ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬೇಳೂರು ಹಾಗೂ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮಗಳನ್ನು ಕರ್ನಾಟಕ ರಾಜ್ಯ ಮಾರುಕಟ್ಟೆ ಸಂವಹನ ಮತ್ತು ಜಾಹೀರಾತು ಲಿಮಿಟೆಡ್ ವತಿಯಿಂದ ಸ್ಮಾರ್ಟ್ ವಿಲೇಜ್‌ಗಳನ್ನಾಗಿ ಅಭಿವೃದ್ಧಿಪಡಿಸುವ ಪೈಲಟ್ ಕಾರ್ಯಕ್ರಮವನ್ನು ಆರಂಭಿಸಲಾಗುವುದು ಎಂದು ಕೆ.ಎಸ್.ಎಂ.ಸಿ.ಎ ಅಧ್ಯಕ್ಷ ಮತ್ತು ಶಾಸಕ ಸತೀಶ ಸೈಲ್ ತಿಳಿಸಿದ್ದಾರೆ.
ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಉದ್ಯಮಶೀಲತೆಯನ್ನು ಉತ್ತೇಜಿಸುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ಗ್ರಾಮೀಣ ಉತ್ಪನ್ನಗಳಿಗೆ ಸಂಘಟಿತ ಮಾರುಕಟ್ಟೆ ಪ್ರವೇಶವನ್ನು ಒದಗಿಸುವುದರ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸುವ ಉದ್ದೇಶ ಹೊಂದಿದೆ.
ಪೈಲಟ್ ಕಾರ್ಯಕ್ರಮದ ಅಡಿಯಲ್ಲಿ ಕೃಷಿ ಮತ್ತು ಸಹಾಯಕ ಚಟುವಟಿಕೆಗಳು, ಮೀನುಗಾರಿಕೆ, ಪಾರಂಪರಿಕ ಉತ್ಪನ್ನಗಳು, ಕರಕುಶಲ ವಸ್ತುಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಆಧಾರಿತ ಉದ್ಯಮಗಳನ್ನು ಗುರುತಿಸಿ ಬೆಂಬಲ ನೀಡಲಾಗುವುದು. ಮಹಿಳೆಯರು ಮತ್ತು ಯುವಕರ ಸಬಲೀಕರಣ ಹಾಗೂ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿವುದು ಈ ಕಾರ್ಯಕ್ರಮದ ಪ್ರಮುಖ ಗುರಿಗಳಾಗಿವೆ.
ಈ ಯೋಜನೆಗೆ, ಕಾರ್ಯಕ್ರಮದ ಅಡಿಯಲ್ಲಿ ತರಬೇತಿ, ಮಾರ್ಗದರ್ಶನ ಬ್ರಾಂಡಿಂಗ್, ಪ್ಯಾಕೇಜಿಂಗ್, ಮತ್ತು ಮಾರುಕಟ್ಟೆ ಸಂರ್ಕದ ಸಮಗ್ರ ಬೆಂಬಲ ಒದಗಿಸಲಾಗುತ್ತದೆ. 12 ವಾರಗಳ ಅವಧಿಯಲ್ಲಿ ಈ ಪೈಲಟ್ ಯೋಜನೆಯಡಿ ಮೂಲ ಸಮೀಕ್ಷೆ, ಉದ್ಯಮ ಗುರುತಿಸುವುದು, ಸಾಮರ್ಥ್ಯ ವೃದ್ದಿ, ಡಿಜಿಟಲ್ ಸಬಲೀಕರಣ ಹಾಗೂ ಜಿಲ್ಲಾ ರಾಜ್ಯ ಮಟ್ಟದ ಮಾರುಕಟ್ಟೆಗಳಿಗೆ ಸಂರ್ಕ ಕಲ್ಪಿಸಲಾಗುತ್ತದೆ. ಯೋಜನೆಯನ್ನು ಗ್ರಾಮ ಪಂಚಾಯತಗಳು ಹಾಗೂ ಸಂಬಂಧಿತ ಇಲಾಖೆ ಸಮನ್ವಯ ಸಾಧಿಸಿ ಅನುಷ್ಠ್ಠಾನಗೊಳಿಸಲಾಗುತ್ತದೆ.
ಬೇಳೂರು ಮತ್ತು ಬೆಳಸೆ ಗ್ರಾಮಗಳಲ್ಲಿ ಜಾರಿಗೆ ಬರುತ್ತಿರುವ ಈ ಸ್ಮಾರ್ಟ್ ವಿಲೇಜ್ ಪೈಲಟ್ ಕಾರ್ಯಕ್ರಮವು ಉತ್ತರ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇತರ ಗ್ರಾಮಗಳಿಗೆ ಮಾದರಿಯಾಗಿ ವಿಸ್ತರಿಸಬಹುದಾದ ಯೋಜನೆಯಾಗಲಿದ್ದು, ಈ ಯೋಜನೆಯಿಂದ 30-50 ಗ್ರಾಮ ಮಟ್ಟದ ಸ್ಥಿರ ಉದ್ಯಮಗಳು ಮತ್ತು ಕುಟುಂಬ ಆದಾಯದಲ್ಲಿ ಹೆಚ್ಚಳ ಹಾಗೂ ಗ್ರಾಮದಿಂದ ಮಾರುಕಟ್ಟೆಗೂ ಬಲವಾದ ಸಂರ್ಕ ಸಾಧಿಸುವ ನೀರೀಕ್ಷೆಯಿದೆ ಎಂದು ಶಾಸಕ ಸತೀಶ ಸೈಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 