ಕೊಪ್ಪಳದಲ್ಲಿಂದು ಕೆಯುಡಬ್ಲ್ಯೂ ಜೆ ದತ್ತಿನಿಧಿ ಪ್ರಶಸಿ ್ತಪ್ರಧಾನ ಸಮಾರಂಭ

KUWJ Charitable Foundation's inaugural ceremony in Koppal today

ಕೊಪ್ಪಳದಲ್ಲಿಂದು ಕೆಯುಡಬ್ಲ್ಯೂ ಜೆ ದತ್ತಿನಿಧಿ ಪ್ರಶಸಿ ್ತಪ್ರಧಾನ ಸಮಾರಂಭ  

ಕೊಪ್ಪಳ  08: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಪ್ಪಳ ನಗರದ ಪಾನಗಂಟಿ ಮತ್ತು ಕಠಾರೆ ಕಲ್ಯಾಣ ಮಂಟಪದಲ್ಲಿ ದಿ,9 ರ ರವಿವಾರ ರಾಜ್ಯಮಟ್ಟದ ಕೆ ಯು ಡಬ್ಲ್ಯೂ ಜೆ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ ಮಧ್ಯಾಹ್ನದ ವೇಳೆಯಲ್ಲಿ ಜರುಗಲಿದೆ, ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ ,ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ರವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ, ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೇಗಾರ ,ಕೆ ವಿ ಪ್ರಭಾಕರ್ ಅವರು ಅಭಿನಂದನಾ ನುಡಿ ಮಾಡಲಿದ್ದಾರೆ ,ಮಾಧ್ಯಮ ತಜ್ಞ ಬಿ.ಕೆ ಮೋಹನ್ ಪುಸ್ತಕ ಕುರಿತು ಮಾತನಾಡಲಿದ್ದಾರೆ, 

 ಮುಖ್ಯ ಅತಿಥಿಗಳಾಗಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ ಕೆ ರವಿ.ಶಾಸಕ ಕೆ ರಾಘವೇಂದ್ರ ಹಿಟ್ನಾಳ ,ಸಂಸದ ಕೆ ರಾಜಶೇಖರ್ ಹಿಟ್ನಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತ ,ಜಿಲ್ಲಾಧಿಕಾರಿ ನಳಿನ್ ಅತುಲ್ ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್, ಎಲ್ ,ಅರಸಿದ್ದಿ ,ಸಂಘದ ರಾಜ್ಯ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಜಿಸಿ ಲೋಕೇಶ್, ಉಪಾಧ್ಯಕ್ಷರಾದ ಭವಾನಿಸಿಂಗ್ ಠಾಕೂರ್ ,ಅಜ್ಜಮಾಡು ರಮೇಶ್ ಕೊಟ್ಟಪ್ಪ ,ಪುಂಡಲಿಕ್ ಬಾಳೋಜಿ, ರಾಜ್ಯ ಕಾರ್ಯದರ್ಶಿ ಯಾದ ಮತ್ತಿಕೆರೆ ಜಯರಾಮ್, ಸೋಮಶೇಖರ ಕೆರಗೋಡು, ನಿಂಗಪ್ಪ ಚೌಡಿ ,ಖಜಾಂಚಿ ವಾಸುದೇವ ಹೊಳ್ಳ ಸೇರಿದಂತೆ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಹನುಮಂತ ಹಳ್ಳಿಕೇರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ ನಾಗರಾಜ ,ರಾಜ್ಯ ಕಾರ್ಯಕಾರಣಿ ಸದಸ್ಯ ಎಂ ಸಾಧಿಕ್ ಅಲಿ ,ರಾಜ್ಯ ಸಮಿತಿ ವಿಶೇಷ ಆಹ್ವಾನಿತ ಸದಸ್ಯ ಎಚ್‌ಎಸ್ ಹರೀಶ್, ರಾಷ್ಟ್ರೀಯ ಮಂಡಳಿ ಸದಸ್ಯ ಜಿಎಸ್ ಗೋನಾಳ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪ್ರಶಸ್ತಿ ಪುರಸ್ಕೃತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ಅದೇ ದಿನ ಬೆಳಿಗ್ಗೆ ಪಾನಗಠ್ಟ ಕಲ್ಯಾಣ ಮಂಟಪದಲ್ಲಿ ಸಂಘದ ರಾಜ್ಯ ಕಾರ್ಯಕಾರಣಿ ಸಭೆ ಮತ್ತು 91ನೇ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆ ಕೂಡ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ರವರ ಅಧ್ಯಕ್ಷತೆಯಲ್ಲಿ ಜರುಗಲಿದೆ ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಮತ್ತು ಆಯಾ ಜಿಲ್ಲೆಗಳಿಂದ ಸಂಘದ ಸದಸ್ಯ ಪತ್ರಕರ್ತರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.