ಕಾಗವಾಡ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಇಬ್ಬರು ಮನೆಗಳ್ಳರ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
Kagawada police arrest two house robbers in massive operation, seize gold ornaments worth lakhs
ಕಾಗವಾಡ 19: ಬಂಗಾರದ ಆಭರಣಗಳು ಕಳ್ಳತನವಾಗಿರುವ ಬಗ್ಗೆ ದಾಖಲಾದ ಪ್ರಕರಣದ ತನಿಖೆ ನಡೆಸಿದ ಕಾಗವಾಡ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಫೆಬ್ರುವರಿ 10 ರಂದು ತಾಲೂಕಿನ ಉಗಾರ ಖುರ್ದ ಪಟ್ಟಣದ ಜಿನ್ನಪ್ಪಾ ಶ್ರೀಪಾಲ ಮಾಕನ್ನವರ ಎಂಬುವರು ಕಾಗವಾಡ ಠಾಣೆಗೆ ಹಾಜರಾಗಿ ತಮ್ಮ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರು.
ಮನೆಯ ಕೊಂಡಿಯನ್ನು ಮುರಿದು ಮನೆಯೊಳಗೆ ನುಗ್ಗಿ ಟ್ರೇಜರಿಗಳಲ್ಲಿ ಇಟ್ಟಿದ 172 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 410 ಗ್ರಾಂ ತೂಕದ ಬೆಳ್ಳಿಯ ಆಭರಣ, 12,000 ರೂ. ಬೆಲೆಯ ಡೈಮೆಂಡ ಉಂಗುರ ಹಾಗೂ 25,000 ರೂ. ನಗದು ಹೀಗೆ ಒಟ್ಟು 22,03,500 ರೂ. ಬೆಲೆಯ ಆಭರಣ ಹಾಗೂ ಹಣವನ್ನು ಕಳ್ಳತನವಾಗಿದೆ ಎಂದು ದೂರು ನೀಡಿದ್ದರು.
ಕಾಗವಾಡ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 45/2026 ಕಲಂ: 331(3) 33(4) 305 ಬಿಎನ್‌ಎಸ್-2023 ನೇದ್ದರಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿಗಳಾದ ಯಾಸೀನ ನಬೀಸಾಬ ಸುತಾರ (29) ಹಾಗೂ ಜಮೀರ ಶೌಖತಅಲಿ ಜಮಾದಾರ (37) ಇವರನ್ನು ಬಂಧಿಸಿ ಅವರಿಂದ 17,19,240 ಬೆಲೆಯ 143.27 ಗ್ರಾಂ. ತೂಕದ ಬಂಗಾರದ ಆಭರಣಗಳು.
2,14,610 ಬೆಲೆಯ 858.44 ಗ್ರಾಂ ತೂಕದ ಬೆಳ್ಳಿಯ ಆಭರಣಗಳು. 25,000 ಬೆಲೆಯ ಬೈಕ್. ಹೀಗೆ ಒಟ್ಟು 19,58,850 ರೂ ಬೆಲೆಯ ಬಂಗಾರದ, ಬೆಳ್ಳಿಯ ಹಾಗೂ ಬೈಕ್ ವಶಪಡಿಸಲಾಗಿದೆ. ಸಧ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 