ಕಾಕತಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕಾಕತಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ Kakati Government High School students selected for national level sports meet

ಕಾಕತಿ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ 

ಕಾಕತಿ 06: ಬಾಕ್ಸಿಂಗ್ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬೆಳಗಾವಿ ತಾಲೂಕಿನ ಸರಕಾರಿ ಪ್ರೌಢಶಾಲೆ ಕಾಕತಿಯ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಕ್ರೀಡೆಗೆ ಬಿಳ್ಕೊಡುಗೆ. ಕರ್ನಾಟಕ ರಾಜ್ಯ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಕಳೆದ ತಿಂಗಳು ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಬಾಕ್ಸಿಂಗ್ ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬೆಳಗಾವಿ ಕಾಕತಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಭೂಮಿಕಾ ಕುರುಬರ ಮತ್ತು ಸಮೀಕ್ಷಾ ಸುತಾರ ರವರನ್ನು ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ಆಗಸ್ಟ್‌ 8 ರಿಂದ 16 ರವರೆಗೆ ನಡೆಯಲಿರುವ ರಾಷ್ಟ್ರಮಟ್ಟದ ಸಬ್ ಜೂನಿಯರ್ ಕ್ರೀಡಾಕೂಟಕ್ಕೆ ಬೀಳ್ಕೊಡಲಾಯಿತು.  ಈ ಸಂದರ್ಭದಲ್ಲಿ ಕಾಕತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವರ್ಷಾ ಮುಚ್ಚಂಡಿಕರ, ಉಪಾಧ್ಯಕ್ಷೆ ರೇಣುಕಾ ಕೋಳಿ ಮತ್ತು ಎಸ್‌ಡಿಎಂಸಿ ಅಧ್ಯಕ್ಷೆ ಜಮುನಾ ಕೋಳಿ, ಉಪಾಧ್ಯಕ್ಷ ಕೃಷ್ಣ ಕುರುಬರ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಾದ ಅಶೋಕ ಖೋತ, ಬಿ ಎನ್ ಮಡಿವಾಳರ ಮತ್ತು ಮಾರ್ಗದರ್ಶಿ ಶಿಕ್ಷಕ ಮಹೇಶ್ ಅಕ್ಕಿ ವಿಜಯ ರಾಜಮನಿ ಸೇರಿದಂತೆ ಶಾಲಾ ಶಿಕ್ಷಕರು ಉಪಸ್ಥಿತರಿದ್ದು ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವರ್ಷಾ ಮುಚ್ಚಂಡಿಕರ ಮಾತನಾಡಿ ಶಾಲೆಯ ವಿದ್ಯಾಭ್ಯಾಸದ ಜೊತೆಗೆ ಬಡ ಕುಟುಂಬಗಳಿಂದ ಬಂದಿರುವ ಈ ಮಕ್ಕಳು ಕಠಿಣ ಪರಿಶ್ರಮದಿಂದ ತರಬೇತಿ ಪಡೆದಿದ್ದು ಮುಂಬರುವ ದಿನಗಳಲ್ಲಿ ಇಂತಹ ಗ್ರಾಮೀಣ ಕ್ರೀಡಾಪಟುಗಳಿಗೆ ನೆರವು ನೀಡಲು ವಿಶೇಷ ಪ್ರೋತ್ಸಾಹ ದೊರೆಯುವಂತಾಗಬೇಕು ಎಂದರು. ಈ ವಿದ್ಯಾರ್ಥಿಗಳಿಗೆ ಮುಖ್ಯ ತರಬೇತುದಾರ ಅಂತರಾಷ್ಟ್ರೀಯ ಒಲಿಂಪಿಕ್ ಬಾಕ್ಸಿಂಗ್ ಪಟು ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತರಾದ ಮುಕುಂದ ಕಿಲ್ಲೇಕರ್, ರಾಷ್ಟ್ರೀಯ ಬಾಕ್ಸಿಂಗ್ ಪಟು,ಮಲ್ಲು ಕರಗುಪ್ಪಿ, ವಿಶಾಲ ನಿಂಬಾಳಕರ, ಮಹೇಶ ಮಸೂತಿ, ಎಮ್ ಎಸ್ ಅಕ್ಕಿ ಮಾರ್ಗದರ್ಶನ ಮಾಡಿರುತ್ತಾರೆ.