ಪಿಯುಸಿ ಫಲಿತಾಂಶದಲ್ಲಿ ಕಲಾ ವಿದ್ಯಾಲಯದ ಸಾಧನೆ
Kala Vidyalaya's performance in PUC results
ಲೋಕದರ್ಶನ ವರದಿ
ಬಾಗಲಕೋಟೆ 10: ಬಿವಿವಿ ಸಂಘದ ಬಸವೇಶ್ವರ ಕಲಾ ಪದವಿ ಪೂರ್ವ ಮಹಾವಿದ್ಯಾಲಯವು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 84.55ಅರಷ್ಟು ಫಲಿತಾಂಶ ಪಡೆದುಕೊಂಡಿದೆ. ಪ್ರಿಯಾಂಕಾ ಮಾ. ನಾಯಕ ಸಮಾಜಶಾಸ್ತ್ರ ಹಾಗೂ ಅರ್ಥಶಾಸ್ತ್ರ ವಿಷಯಗಲ್ಲಿ 100ಕ್ಕೆ 100ರಷ್ಟು ಅಂಕಗಳನ್ನು ಪಡೆದುಕೊಂಡಿದ್ದು ಒಟ್ಟು 587 ಅಂಕಗಳಿಂದ ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಲಕ್ಷ್ಮೀ ಪಾಟೀಲ 563 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಗಿಟ್ಟಿಸಿಕೊಂಡಿದ್ದು ಪೂಜಾ ಕೋರಿ 555 ಅಂಕಗಳ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 110 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 93 ತೇರ್ಗಡೆಯಾಗಿದ್ದಾರೆ.
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ, ವೀರಣ್ಣ ಸಿ. ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ್ ಎನ್. ಅಥಣಿ, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಸೂಳಿಭಾವಿ, ಆಡಳಿತ ಅಧಿಕಾರಿಗಳಾದ ವ್ಹಿ. ಆರ್. ಶಿರೋಳ, ಡಾ. ವ್ಹಿ ಎಸ್ ಕಟಗಿಹಳ್ಳಿಮಠ, ಪ್ರಾಚಾರ್ಯರಾದ ಎಸ್.ಆರ್. ಮೂಗನೂರಮಠ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 