ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅರ್ಥಪೂರ್ಣ ಆಚರಣೆಗೆ ಸಿದ್ಧತೆ- ಎಡಿಸಿ ಮಹಮ್ಮದ್ ಝುಬೇರ್ ಸೂಚನೆ
Kalyana Karnataka Utsav Day: Preparation for a meaningful celebration- ADC Muhammad Zubair notes
ಬಳ್ಳಾರಿ 08: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ನಗರದಲ್ಲಿ ಅತ್ಯಂತ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸಕಲ ಪೂರ್ವಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಸೂಚಿಸಿದರು.
ಜಿಲ್ಲಾ ಕೇಂದ್ರದಲ್ಲಿ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕುರಿತು ಚರ್ಚಿಸಲು ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರಿ್ಡಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಂದು ಹೋಗಲು ಸುಲಭವಾಗುವ ದೃಷ್ಟಿಯಿಂದ ಈ ಬಾರಿಯೂ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲೇ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದ್ದು, ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ 371(ಜೆ) ಮಹತ್ವದ ಅರಿವು ಮೂಡಿಸಲು ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಆಹ್ವಾನಿಸಲು ಕ್ರಮ ಕೈಗೊಳ್ಳಬೇಕು. ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನ ತಂದುಕೊಡಲು ನಡೆದ ಹೋರಾಟಗಳು ಹಾಗೂ ಅದರಿಂದ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಆಗಿರುವ ಪ್ರಯೋಜನಗಳ ಬಗ್ಗೆ ಇಂದಿನ ಯುವಪೀಳಿಗೆಗೆ ಸ್ಪಷ್ಟ ಅರಿವು ಮೂಡಿಸಬೇಕು ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 