ದಾಸ ಸಾಹಿತ್ಯದ ಮಹಾನ ಸಂತ ಕನಕದಾಸ- ಸಂಕನೂರ
Kanakadasa, the great saint of Dasa literature - Sankanur
ಗದಗ 8: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ(ನ.8) ರಂದು ನಗರದ ಹಾತಲಗೇರಿ ನಾಕಾದಲ್ಲಿ ದಾಸ ಶ್ರೇಷ್ಠ ಸಂತ ಕನಕದಾಸ ಜಯಂತಿ ಆಚರಿಸಲಾಯಿತು.ವಿಧಾನ ಪರಿಷತ ಸದಸ್ಯರಾದ ಎಸ್.ವಿ. ಸಂಕನೂರ ಅವರು ದಾಸ ಶ್ರೇಷ್ಠಸಂತ ಕನಕದಾಸರ ಪ್ರತಿಮೆಗೆ ಮಾಲಾರೆ್ಣ ಮಾಡುವ ಮೂಲಕ ಗೌರವ ಸಮರ್ಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ಕನಕದಾಸರು ಕನ್ನಡ ಸಾಹಿತ್ಯವನ್ನು ಉತ್ತುಂಗಕ್ಕೆ ಕೊಂಡೊಯ್ದಂತಹ ಮಹಾನ ದಾಸರಾಗಿದ್ದರು. ದಾಸ ಸಾಹಿತ್ಯದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದುವ ಮೂಲಕ ಸಮಾಜ ಸುಧಾರಣೆಗೆ ಮುಂದಾಗಿ ತಮ್ಮ ದಾಸ ಸಾಹಿತ್ಯದ ಮೂಲಕ ಸಮಾಜದಲ್ಲಿ ಐಕ್ಯತೆ ಮೂಡಿಸುವ ಕಾರ್ಯ ಮಾಡಿದ ಮಹಾನ ಸಂತರಾಗಿದ್ದರು ಎಂದು ನುಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಜೊಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ ಬಿ ಅಸೂಟಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಉಪವಿಭಾಗಾಧಿಕಾರಿ ಗಂಗಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ. ಬಸವರಾಜ ಬಳ್ಳಾರಿ, ಸಮೂದಾಯದ ಜಿಲ್ಲಾಧ್ಯಕ್ಷ ಪಕ್ಕೀರ್ಪ ಹೆಬಸೂರ ಸೇರಿದಂತೆ ಸಮಾಜದ ಮುಖಂಡರು, ಗಣ್ಯರು ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 