ಚಿಕ್ಕೋಡಿಯಲ್ಲಿ ಕನಕದಾಸರ ಜಯಂತಿ ಅದ್ದೂರಿಯಾಗಿ ಆಚರಣೆ
Kanakadasa Jayanti selebrá ku grandesa na Chikkodi
ಚಿಕ್ಕೋಡಿ, 08 : ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಶ್ರೀ ಸಂತ ಶ್ರೇಷ್ಠ ಕನಕದಾಸರವರ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಾಸಕ ಗಣೇಶ ಹುಕ್ಕೇರಿ ನೇತೃತ್ವದಲ್ಲಿ ನಡೆಸಲಾಗಿದ್ದು, ದೆಹಲಿ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ, ತಹಶೀಲ್ದಾರ ರಾಜೇಶ ಬುರ್ಲಿ, ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ ಸೇರಿದಂತೆ ಗಣ್ಯರು ಕನಕದಾಸರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶಾಸಕ ಗಣೇಶ ಹುಕ್ಕೇರಿ ಮಾತನಾಡಿ,“ಜಿಲ್ಲಾ ಕೇಂದ್ರವಾಗಲು ತುದಿಗಾಲ ಮೇಲೆ ನಿಂತಿರುವ ಚಿಕ್ಕೋಡಿ ಪಟ್ಟಣದಲ್ಲಿ ಭವ್ಯವಾದ ಕನಕ ಭವನ ನಿರ್ಮಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಈ ಉದ್ದೇಶಕ್ಕಾಗಿ ವಿಶೇಷ ಅನುದಾನ ಒದಗಿಸಲಾಗುತ್ತದೆ,” ಎಂದು ತಿಳಿಸಿದರು.ಉಪವಿಭಾಗಾಧಿಕಾರಿ ಸುಭಾಷ ಸಂಪಗಾವಿ ಅವರು ಮಾತನಾಡಿ, ಕನಕದಾಸರು ಸಮಾಜದಲ್ಲಿ ಸಮಾನತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ನೀಡಿದ ಮಹಾನ್ ಸಂತರು. ಅವರ ಕೀರ್ತನೆಗಳು ಇಂದು ಕೂಡ ಸಾಂಸ್ಕೃತಿಕ ಹಾಗೂ ನೈತಿಕ ಮಾರ್ಗದರ್ಶನ ನೀಡುತ್ತಿವೆ. ಯುವಕರು ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಕುರುಬರ ಸಂಘದ ಅಧ್ಯಕ್ಷ ಲಕ್ಷ್ಮಣ ಡಂಗೇರ, ಮುಖಂಡರಾದ ಸಿದ್ದಪ್ಪ ಮರ್ಯಾಯಿ, ಎಚ್.ಎಸ್. ನಸಲಾಪೂರೆ, ಮಾಳು ಕೋರೆ, ಸುರೇಶ ಬಾಡಕರ, ರಾಮಾ ಕಟ್ಟಿಕಾರ, ಸುರೇಶ ಕಟ್ಟಿಕರ, ವಿಠ್ಠಲ ವಾಳಕೆ, ರಾಮಣ್ಣಾ ಬನ್ನಟಿ, ಸುರೇಶ ಹೆಗಡೆ, ಶಿವಾನಂದ ಮರ್ಯಾಯಿ, ಮಾರುತಿ ಹರಕೆ, ನಿಂಗರಾಜ ಹರಕೆ, ಚಂದ್ರಕಾಂತ ಪೂಜೇರಿ, ಎಂ.ಕೆ. ಪೂಜಾರಿ, ಲಕ್ಷ್ಮಣ ಪೂಜೇರಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 