ಕನಕದಾಸರು ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ಮಹಾನ ದಾರ್ಶನಿಕರು

ಕನಕದಾಸರು ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ಮಹಾನ ದಾರ್ಶನಿಕರು Kanakadasa was a great philosopher who corrected the problems of society through his hymns


ಹಾವೇರಿ  08: ಕನಕದಾಸರು 15-16ನೇ ಶತಮಾನದಲ್ಲಿ ಜನಪ್ರಿಯವಾಗಿದ್ದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಅವರದೇ ಆದ ಕಾಣಿಕೆ  ನೀಡಿದ್ದಾರೆ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸವರಾಜ  ಶಿವಣ್ಣನವರ ಹೇಳಿದರು. 

ಬ್ಯಾಡಗಿ ತಾಲೂಕಿನ ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠ, ಕಾಗಿನೆಲೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಸುಕ್ಷೇತ್ರ ಕಾಗಿನೆಲೆ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಕ್ತ ಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ - 2025 ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ನೆರೆವೇರಿಸಿ ಮಾತನಾಡಿದ ಅವರು, ಕನಕದಾಸರ ಜೀವನದ ಚರಿತ್ರೆಯನ್ನು  ನೋಡುವುದಾದರೆ ಅವರು  ಕುರುಬ ಸಮಾಜದಲ್ಲಿ ಹುಟ್ಟಿ ದಾಸ ಸಾಹಿತ್ಯಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.  

ಕನಕದಾಸರು ಮೂಲತಃ ದಂಡನಾಯಕರಾಗಿದ್ದರು ಯುದ್ಧವೊಂದರಲ್ಲಿ ವೈರಾಗ್ಯ ಉಂಟಾಗಿ ಹರಿಭಕ್ತರದರು.  ಕನಕದಾಸರು ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿ, ಸಮಾಜದಲ್ಲಿನ ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ ದಾರ್ಶನಿಕರು. ಇವರ ಜೀವನ ತತ್ವಗಳು ಇಂದಿನ ಪೀಳಿಗೆಗೆ ಮಾದರಿಯಾಗಿವೆ ಎಂದರು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಕನಕದಾಸರು ಯಾವುದೇ ಜಾತಿ ಮತಕ್ಕೆ ಸೀಮಿತರಾದವರಲ್ಲ, ಎಲ್ಲ ಸಮುದಾಯದವರ ಒಳಿತನ್ನು ಬಯಸಿದವರು.  ಅವರ ತತ್ವ ಹಾಗೂ ವಿಚಾರ ಧಾರೆಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಕೊಳ್ಳಬೇಕು. ಮುಂದಿನ ವರ್ಷ ದಿಂದ ಎರಡು ಅಥವಾ ಮೂರು ದಿನಗಳ ಕಾಲ ಕನಕ ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಸುಕ್ಷೇತ್ರ ಕಾಗಿನೆಲೆ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.ಕಾರ್ಯಕ್ರಮದಲ್ಲಿ 2024-25 ನನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ  ಹಾಗೂ ಪಿ ಯು ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.ಕಾರ್ಯಕ್ರಮದಲ್ಲಿ  ಧರ್ಮದರ್ಶಿಗಳು ಹಾಗೂ ಆಡಳಿತಾಧಿಕಾರಿಗಳು, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಹಾಗೂನಗರಾಭಿವೃದ್ಧಿ ಪ್ರಾಧಿಕಾರು  ಅಧ್ಯಕ್ಷರಾದ ಎಸ್ ಎಫ್ ಏನ್ ಗಾಜಿಗೌಡ್ರ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್‌. ಆರ್‌. ಪಾಟೀಲ,   ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೊಡಿ, ಅಪರ ಜಿಲ್ಲಾಧಿಕಾರಿಗಳು ಹಾಗೂ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾದ ಡಾ. ನಾಗರಾಜ. ಎಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುನೀತ, ಹಾವೇರಿ ಉಪ ವಿಭಾಗಧಿಕಾರಿ ಕಲ್ಯಾಣಿ ಕಾಂಬಳೆ, ತಹಸೀಲ್ದಾರ್ ಶರಣಮ್ಮ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ವೀರಯ್ಯಸ್ವಾಮಿ ಬಿ. ಹಿರೇಮಠ,,ಮಾಜಿ ಸಚಿವರಾದ ಆರ್‌. ಶಂಕರ್, ಸಮುದಾಯದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.