ಕಾನಿಪ ಧ್ವನಿ ಜಿಲ್ಲಾಧ್ಯಕ್ಷರಾಗಿ ಕಂದಕೂರು ರಾಮುಡು ನೇಮಕ
ಬಳ್ಳಾರಿ 14: ನಗರದಲ್ಲಿ ಕಲಿದುರ್ಗ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಕಂದಕೂರು ರಾಮುಡು ಇವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಬಳ್ಳಾರಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ಅವರು ನನ್ನ ಮೇಲೆ ವಿಶ್ವಾಸ ಇಟ್ಟು ನನ್ನನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಅವರ ವಿಶ್ವಾಸಕ್ಕೆ ಮತ್ತು ನಂಬಿಕೆಗೆ ದಕ್ಕೆಯಾಗದಂತೆ ಸಂಘಟನೆಯ ನಿಯಮ ಮತ್ತು ನಿಬಂಧನೆಗಳಿಗೆ ಒಳಪಟ್ಟು ಕೆಲಸ ಮಾಡುತ್ತಾ ಧ್ವನಿ ಸಂಘಟನೆಯನ್ನು ಜಿಲ್ಲಾಧ್ಯಂತ ವಿಸ್ತರಿಸಿ ಜಿಲ್ಲಾ ಪದಾಧಿಕಾರಿಗಳನ್ನು ಮತ್ತು ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗುತ್ತೇನೆ ಎಂದು ಕಂದಕೂರು ರಾಮುಡು ತಿಳಿಸಿದರು.ಧ್ವನಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷರಾದ ಹಗರಿ ಪ್ರಭಾಕರ್, ಭೀಮಣ್ಣ ಸೇರಿದಂತೆ ಇತರ ಪದಾಧಿಕಾರಿಗಳು ಮತ್ತು ಸದಸ್ಯರು ನೂತನ ಜಿಲ್ಲಾಧ್ಯಕ್ಷ ಕಂದಕೂರು ರಾಮುಡು ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.