ಕನ್ನಡ- ಕನ್ನಡಿಗರು ನಿರಾಭಿಮಾನಿಗಳಾಗದೆ, ಸ್ವಾಭಿಮಾನಿಗಳಾಗಬೇಕಾಗಿದೆ- ಇಂದಿರಾ ಕೊಪ್ಪದ
Kannada - Kannadigas need to become self-respecting, not self-respecting - Indira Koppada
ರಾಣೇಬೆನ್ನೂರು 08 : ಕನ್ನಡ ಸಾಹಿತ್ಯ ಮತ್ತು ಭಾಷೆಗೆ ಸಾವಿರಾರು ವರ್ಷಗಳ ಭವ್ಯ ಇತಿಹಾಸ ಪರಂಪರೆ ಇದೆ. ಅತ್ಯಂತ ಸರಳ ಮತ್ತು ಸುಂದರ ಭಾಷಾ ಲಿಪಿ ಕನ್ನಡಕ್ಕೆ ಮಾತ್ರ ಇದೆ ಎನ್ನುವುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾಗಿದೆ ಎಂದು ಶಿಕ್ಷಕಿ ಶ್ರೀಮತಿ ಇಂದಿರಾ ಕೊಪ್ಪದ ಹೇಳಿದರು. ಅವರು, ನಗರ ಹೊರ ವಲಯದ ಶ್ರೀ ತರಳಬಾಳು ಜಗದ್ಗುರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕನ್ನಡ ನಾಡು, ನುಡಿ, ಸಾಹಿತ್ಯ, ಮತ್ತು ಸಂಸ್ಕೃತಿ ಅಳವಡಿಸಿಕೊಂಡಾಗ ಮಾತ್ರ ಯಾವುದೇ ಭಾಷೆಯಲ್ಲಿ ಅತ್ಯಂತ ಸರಳವಾಗಿ ತಮ್ಮ ಪ್ರಬುದ್ಧತೆಯನ್ನು ಮೆರೆಯಲು ಸಾಧ್ಯವಾಗುತ್ತದೆ ಎಂದರು. ಬದುಕು ಮತ್ತು ಅನ್ನ ನೀಡುವ ಭಾಷೆ ಕನ್ನಡವಾಗಿದ್ದರೆ, ಜೀವನ ಭವಿಷ್ಯವನ್ನು ಕಟ್ಟಿಕೊಡುವ ಭಾಷೆ ಇಂಗ್ಲಿಷ್ ಆಗಿದೆ. ಇಂಗ್ಲಿಷ್ ಭಾಷೆಗೆ ಪ್ರಭುದ್ಧತೆಗೆ ಕನ್ನಡ ಭಾಷೆ ಎನ್ನುವುದನ್ನು ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು. ವಿದ್ಯಾರ್ಥಿಗಳು ಭಾಷಾ ಸಂಸ್ಕೃತಿ ಬೆಳೆಸಿಕೊಳ್ಳಬೇಕು.ಕನ್ನಡ ಭಾಷೆ ಮತ್ತು ಸಾಹಿತ್ಯ ಪರಂಪರೆ ಬಹು ದೊಡ್ಡದು. ಅದರ ಕುರಿತು ಅರಿವು ಮೂಡಿಸಿಕೊಳ್ಳಬೇಕಾ ದರೇ, ಕನ್ನಡದ ಕಾವ್ಯ, ಮತ್ತು ವಿದ್ವಾಂಸರ ಕೃತಿಗಳನ್ನು ಓದಬೇಕು, ಅಷ್ಟೇ ಅಲ್ಲ ಅದರ ಅರ್ಥವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಸ್. ಜಿ. ಮಾಕನೂರ ಅವರು ಅಧ್ಯಕ್ಷತೆ ವಹಿಸಿದ್ದರು. ಕಾವ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು. ರಾಜು ಜಿಂಗಾಡೆ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕಿ ಡಾ. ಸವಿತಾ ಚನ್ನಗೌಡರ ಪ್ರಸ್ತಾವಿಕವಾಗಿ ಮಾತನಾಡಿದರು. ಸುಷ್ಮಾ ಎಕ್ಕೆಗೊಂದಿ ಪರಿಚಯಿಸಿದರು. ಎಸ್. ಜಿ. ಶಶಾಂಕ್ ನಿರೂಪಿಸಿ, ಗುರುರಾಜ ರೋಗಿ ವಂದಿಸಿದರು. ನಂತರ ನಡೆದ ಕನ್ನಡ ನಾಡು, ನುಡಿ, ಸಂಸ್ಕೃತಿ, ಪ್ರತಿಬಿಂಬಿತ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಸಾವಿರಾರು ನಾಗರಿಕರ ಗಮನ ಸೆಳೆದವು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 