ಲೋಕದರ್ಶನ ವರದಿ
ಮುಧೋಳ 18: ಬೆಳಕು ಸಂಸ್ಥೆಯಿಂದ ನೀಡಲಾಗುವ ರಾಜ್ಯ ಮಟ್ಟದ ಕನ್ನಡದ ಕಣ್ಮಣಿ ಪ್ರಶಸ್ತಿಯನ್ನು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾವ ನಗರದಲ್ಲಿ ಹಮ್ಮಿಕೊಂಡಿದ್ದ ತ್ರಿವಳಿ ಜಿಲ್ಲಾ ಬೆಳಕು ಸಾಹಿತ್ಯ ಸಮ್ಮೇಳನದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾದ ಬಸವರಾಜ ಬೊಮ್ಮಾಯಿ ಯವರು ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಮಯದಲ್ಲಿ ಸಮ್ಮೇಳನದ ಸವರ್ಾಧ್ಯಕ್ಷರಾದ ನಿರ್ಮಲಾ ಯಲಿಗಾರ,ಬೆಳಕು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಅಣ್ಣಪ್ಪ ಮೇಟಿಗೌಡ, ಸಂಸ್ಥೆಯ ರಾಜ್ಯಾಧ್ಯಕ್ಷರಾದ ಆನಂದ ಪೂಜಾರಿ, ಹಾವೇಯ ಜಿಲ್ಲಾಧ್ಯಕ್ಷರಾದ ನಾಗಪ್ಪ ಬೆಂತೂರ,ಶಿಕ್ಷಕರ ಸಂಘದ ರಾಜ್ಯ ಉಪಾ ಧ್ಯಕ್ಷರಾದ ಕಿರಣ ರಘುಪತಿ, ಮಲ್ಲಿಕಾಜರ್ುನ ಹುಲಸೂರ ಮುಂತಾದವರು ಹಾಜರಿದ್ದರು.