ಡಿಮ್ಹಾನ್ಸ್ ಸಂಸ್ಥೆಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ದಿನಾಚರಣೆ
Kannada Rajyotsava Day celebrated with enthusiasm at Dimhans Institute
ಧಾರವಾಡ 03: ಕನ್ನಡ ನಾಡು, ನುಡಿಗಾಗಿ ಶ್ರಮಿಸಿದ ಮಹನೀಯರು ನಮ್ಮೆಲ್ಲರಿಗೂ ಮಾದರಿ, ಕನ್ನಡ ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಕರ್ನಾಟಕದ ಇತಿಹಾಸದಲ್ಲಿ ನವ್ಹೆಂಬರ್ 1 ಎಂದೂ ಮರೆಯದ ದಿನ ಮತ್ತು ಸಂಭ್ರಮಿಸುವ ದಿನವಾಗಿದೆ ಎಂದು ಡಿಮ್ಹಾನ್ಸ್ ನಿರ್ದೇಶಕ ಡಾ.ಅರುಣಕುಮಾರ ಸಿ. ಅವರು ತಿಳಿಸಿದರು. ಅವರು ನವೆಂಬರ 1 ರಂದು ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ಧಾರವಾಡದಲ್ಲಿ ಆಯೋಜಿಸಿದ ಕನ್ನಡ ರಾಜ್ಯೋತ್ಸವ ದಿನದಂದು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.
ಸಾವಿರಾರು ವರ್ಷಗಳ ಇತಿಹಾಸ ಇರುವ ಕನ್ನಡ ನಾಡಿನಲ್ಲಿ, ಜ್ಞಾನಪೀಠ ಪ್ರಶಸ್ತಿಗಳು ಹಾಗೂ ಇನ್ನು ಅನೇಕ ಶ್ರೇಷ್ಠ ಪ್ರಶಸ್ತಿಗಳನ್ನು ಪಡೆದ ವ್ಯಕ್ತಿಗಳು ಕರ್ನಾಟಕದವರು ಎಂಬ ಹೆಮ್ಮೆ ಎಲ್ಲರದ್ದಾಗಿದೆ. ಕನ್ನಡ ನೆಲದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಾಗೂ ಸೇವೆ ಸಲ್ಲಿಸುತ್ತಿರುವ ಮಹನೀಯರಿದ್ದಾರೆ. ಕನ್ನಡ ಮಾತನಾಡುವುದೇ ಆನಂದ, ಕನ್ನಡ ನುಡಿಯೇ ಚೆಂದ ಎಂದು ತಿಳಿಸಿದರು.
ಧೈರ್ಯ ಹಾಗೂ ತ್ಯಾಗದ ಸಂಕೇತ ಕಿತ್ತೂರು ರಾಣಿ ಚೆನ್ನಮ್ಮ, ಸಂಗೋಳ್ಳಿ ರಾಯಣ್ಣ ಹಾಗೂ ಅನೇಕ ಶ್ರೇಷ್ಠ ವ್ಯಕ್ತಿಗಳು ಕನ್ನಡ ನಾಡು, ನೆಲ, ಭಾಷೆ ಹಾಗೂ ನುಡಿಗಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಕರ್ನಾಟಕದಲ್ಲಿ ಕನ್ನಡ ಭಾಷೆ ಪ್ರತಿ ಮನೆ ಮನೆಯಲ್ಲೂ ಬಳಸುವಂತಾಗಲಿ ಎಂದು ಹಾರೈಸಿದರು. ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀನು ಕನ್ನಡವಾಗಿರು ಎನ್ನುವ ಕುವೆಂಪುರವರ ನುಡಿಯನ್ನು ಸ್ಮರಿಸಿ, ಕನ್ನಡ ಭಾಷೆಯ ಇತಿಹಾಸವನ್ನು ಮರೆಯಬಾರದೆಂದು ತಿಳಿಸಿದರು.
ಡಿಮ್ಹಾನ್ಸ್ ಸಂಸ್ಥೆಯ ಮುಖ್ಯ ಆಡಳಿತ ಅಧಿಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ಮಾತನಾಡಿ, ಕನ್ನಡ ಭಾಷೆ ಇಂದು ವಿಶ್ವದ ಅನೇಕ ದೇಶಗಳಲ್ಲಿ ಬಳಸುತ್ತಿದ್ದಾರೆ ಹಾಗೂ ಇಷ್ಟಪಡುತ್ತಿದ್ದಾರೆ ಎನ್ನುವುದು ಕನ್ನಡಿಗರ ಹೆಮ್ಮೆಯಾಗಿದೆ. ಕನ್ನಡ ಇತಿಹಾಸದಲ್ಲಿ ಅನೇಕ ಮಹಾನ್ ವಿದ್ವಾಂಸರಲ್ಲಿ ಪಂಪ, ರನ್ನ, ಪೊನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸ, ಕುವೆಂಪು, ಡಿ.ವಿ.ಗುಂಡಪ್ಪ, ಬಿ.ಎಂ.ಶ್ರೀಕಂಠಯ್ಯನವರು, ಡಾ.ದ.ರಾ.ಬೇಂದ್ರೆ, ಡಾ.ವಿ.ಕೃ.ಗೋಕಾಕ್, ಕೆ.ಎಸ್.ನರಸಿಂಹಸ್ವಾಮಿ ಹಾಗೂ ಇತರ ಅನೇಕ ವಿದ್ವಾಂಸರು ಕನ್ನಡ ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆ ಮಹತ್ತರವಾದದ್ದಾಗಿದೆಯೆಂದರು.
ಕಾರ್ಯಕ್ರಮದಲ್ಲಿ ಡಿಮ್ಹಾನ್ಸ್ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ರಾಘವೇಂದ್ರ ನಾಯಕ್, ನರ್ಸಿಂಗ್ ಶೂಶ್ರೂಷಾಧಿಕ್ಷಕಿ ಲವ್ಹಲಿ ಮಾಥ್ಯೂಸ್, ಸೈಕಿಯಾಟ್ರಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕ ಡಾ.ರಂಗನಾಥ ಕುಲಕರ್ಣಿ, ಮನೋರೋಗ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀನಿವಾಸ ಕೊಸಗಿ, ಕಛೇರಿ ಸಿಬ್ಬಂದಿ ವರ್ಗದವರು, ಡಾ.ಶಿವರುದ್ರ್ಪ ಭೈರ್ಪನವರ ಹಾಗೂ ಡಿಮ್ಹಾನ್ಸ್ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು, ಟೆಲಿಮಾನಸ್ ತಂಡದವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಮನೋವೈದ್ಯಕೀಯ ಸಮಾಜ ಕಾರ್ಯಕರ್ತ ಪ್ರಶಾಂತ ಪಾಟೀಲ ನಿರೂಪಿಸಿದರು, ಅಶೋಕ ಕೋರಿ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 