ಪಟ್ಟಣದಲ್ಲಿ ಕಾರ ಹುಣ್ಣಿಮೆ ಸಂಭ್ರಮ
Kara full moon celebration in the town
ಲೋಕದರ್ಶನ ವರದಿ
ದೇವರಹಿಪ್ಪರಗಿ : ಕಾರ ಹುಣ್ಣಿಮೆ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರೈತರು ಬುಧವಾರದಂದು ಎತ್ತುಗಳನ್ನು ವಿಶೇಷವಾಗಿ ಸಿಂಗರಿಸಿ ಹಬ್ಬ ಆಚರಿಸಿ ಸಂಭ್ರಮಿಸಿದರು. ಪಟ್ಟಣದಲ್ಲಿ ಎತ್ತುಗಳಿಗೆ ಅಲಂಕಾರಿಕ ಬಣ್ಣಗಳನ್ನು ಹಚ್ಚಿ, ಕೋಡಣಸು, ಜೂಲುಗಳನ್ನು ಹಾಕಿ ಸಿಂಗರಿಸಲಾಗಿತ್ತು. ಸಂಜೆ ಪಟ್ಟಣದ ಕರಿದೇವರ ದೇವಸ್ಥಾನದಿಂದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮೇನ್ ಬಜಾರ್ ರಥದ ಮುಂದೆ ಸಾಂಪ್ರದಾಯಿಕವಾಗಿ ಎತ್ತುಗಳನ್ನು ಒಟ್ಟುಗೂಡಿಸಿ ಎತ್ತಿನ ಕೋಡು ಮತ್ತು ಕೊರಳಿಗೆ ಕಡುಬು, ವಡೆ, ಕರಚಿಕಾಯಿ, ಶೇಂಗಾಕಾಯಿ , ಕೊಬ್ಬರಿ ಬಟ್ಟಲು ಸೇರಿದಂತೆ ವಿವಿಧ ಖಾದ್ಯ ಪದಾರ್ಥಗಳನ್ನು ಕಟ್ಟಿ ಸಾಲಾಗಿ ನಿಲ್ಲಿಸಲಾಗಿತ್ತು. ಎತ್ತುಗಳಿಗೆ ಪೂಜೆ ಸಲ್ಲಿಸಿದ ನಂತರ ಎತ್ತುಗಳಿಗೆ ಮುಂಗಾರು ಮತ್ತು ಹಿಂಗಾರು ಎಂದು ನಾಮಕರಣ ಮಾಡಿ ಐದು ಬಾರಿ ಓಡಿಸಲಾಯಿತು. ಇದೇ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಸಂಗು ಯಂಬತ್ನಾಳ,ನಿಂಗು ಅವಟಿ, ರಾಚಯ್ಯ ಹಿರೇಮಠ,ಸಂಪತ್ ಜಮಾದಾರ, ವೀರೇಶ ಕುದರಿ, ಕಾಶಿನಾಥ ಕೋರಿ, ಅಪ್ಪು ಪಾಟೀಲ ಸೇರಿದಂತೆ ಯುವಕರು, ಪ್ರಮುಖರು, ಗಣ್ಯರು ಹಾಗೂ ರೈತರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 