ಆತ್ಮ ರಕ್ಷಣೆಗಾಗಿ ಕರಾಟೆ ಕಲೆ ಅತ್ಯಗತ್ಯ, ಬ್ಲಾಕ್ ಬೆಲ್ಟ್ ಪಟುಗಳ ಸಾಧನೆ ನಿಲ್ಲಬಾರದು
Karate is essential for self-defense, the achievements of black belt masters should not stop
ಶಿಗ್ಗಾವಿ 03 : ಕರಾಟೆ ತರಬೇತಿಯು ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಮಟ್ಟದ ಆತ್ಮರಕ್ಷಣಾ ಕಲೆಯನ್ನು ಕಲಿಯುವುದು ಇಂದಿನ ಕಾಲದ ಅವಶ್ಯಕತೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುನ್ನಾ ಪಠಾಣ ಹೇಳಿದರು.
ಪಟ್ಟಣದ ಡಾಽ ಅಂಬೇಡ್ಕರ ಭವನದಲ್ಲಿ ಲಯನ್ ಮಾರ್ಷಲ್ ಆರ್ಟ್ಸ್‌ನ ಶಾಟೋಕಾನ್ ಕರಾಟೆ ಡೋ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬ್ಲ್ಯಾಕ್ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರಾಟೆ ಕೇವಲ ಹೊಡೆದಾಟದ ಕಲೆಯಲ್ಲ, ಅದೊಂದು ಶಿಸ್ತಿನ ಜೀವನ ಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಸದೃಢತೆಯ ಜೊತೆಗೆ ಮಾನಸಿಕ ಸ್ಥಿರತೆ ಬಹಳ ಮುಖ್ಯವಾಗಿರುವುದರಿಂದ ಪಾಲಕರು ಮಕ್ಕಳಿಗೆ ಇಂತಹ ಕಲೆಗಳನ್ನು ಕಲಿಸಲು ಮುಂದಾಗಬೇಕು ಎಂದು ಹೇಳಿದರು.
ಗ್ಯಾರಂಟಿ ಸಮೀತಿಯ ಅಧ್ಯಕ್ಷ ಎಸ್.ಎಪ್ ಮಣಕಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಪ್ರತಿಭಾನ್ವಿತ ಕರಾಟೆ ಪಟುಗಳಿಗೆ ಸೂಕ್ತ ವೇದಿಕೆ ಕಲ್ಪಿಸಿರುವ ಶಾಟೋಕಾನ್ ಕರಾಟೆ ಡೋ ಸಂಸ್ಥೆಯಯ ಕಾರ್ಯ ಸ್ಲಾಘನೀಯವಾಗಿದೆ. ಇಂದು ಬ್ಲ್ಯಾಕ್ ಬೆಲ್ಟ್ ಪಡೆದ ಸಾಧಕರು ಇಷ್ಟಕ್ಕೆ ತೃಪ್ತರಾಗದೆ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ನಾಡಿಗೆ ಕೀರ್ತಿ ತರಬೇಕು. ಪೋಷಕರು ತಮ್ಮ ಮಕ್ಕಳ ಕ್ರೀಡಾಸಕ್ತಿಗೆ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತರಬೇತಿ ಮುಗಿಸಿದ ಕರಾಟೆ ಪಟುಗಳಿಗೆ ಅಧಿಕೃತವಾಗಿ 'ಬ್ಲ್ಯಾಕ್ ಬೆಲ್ಟ್' ಹಾಗೂ ಸಾಧನಾ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗುಡ್ಡಪ್ಪ ಜಲದಿ, ಗೌಸಖಾನ ಮುನಸಿ, ಮಂಜು ತಿಮ್ಮಾಪುರ, ಅಣ್ಣಪ್ಪ ಲಮಾಣಿ, ಮುನ್ನಾ ಲಕ್ಷಮೇಶ್ವರ, ಶಂಕರಗೌಡ ಪಾಟೀಲ, ಮಂಜುನಾಥ ಹಿರೂರ, ಬಾಬರ ಬಾವೋಜಿ, ಶಂಬು ನೆರ್ತಿ, ಈರಣ್ಣ ಬಳಿಗಾರ, ಬಸವರಾಜ ಕುಲಕರ್ಣಿ, ಹನುಮಂತ ಗದಗ, ಶ್ರೇಯಸ್ ಕಲಾಲ, ಚಂದ್ರು ಕಲ್ಲಕಟ್ಟಿ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 