ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ಅವಕಾಶ ವಂಚಿತ ಮಕ್ಕಳಿಗೆ ಕಾಮಧೇನು: ಈಶ್ವರ ಉಳ್ಳಾಗಡ್ಡಿ
Karnataka Child Development Academy is a boon for underprivileged children: Eshwar Ullagaddi
ಧಾರವಾಡ 11: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನಾಡಿನ ಅವಕಾಶ ವಂಚಿತ ಹಾಗೂ ನಾಡಿನ ಮಕ್ಕಳ ಪಾಲಿನ ಕಾಮಧೇನುವಾಗಿದೆ. ಮಕ್ಕಳಿಗಾಗಿ ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮಗಳು ನಿಜಕ್ಕೂ ಅರ್ಥಪೂರ್ಣವಾಗಿದ್ದು, ಅಧ್ಯಕ್ಷ ಸಂಗಮೇಶ ಬಬಲೇಶ್ವರ ನೇತೃತ್ವದಲ್ಲಿ ಮಕ್ಕಳ ಬದುಕಿಗೆ ಹೊಸ ತಿರುವು ನೀಡಲು ಅಕಾಡೆಮಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ತುಂಬಾ ಅರ್ಥಪೂರ್ಣವಾಗಿವೆ ಎಂದು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.ಅವರು ಇಂದು (ನ.11) ಕರ್ನಾಟಕ ಬಾಲ ವಿಕಾಸ ಅಕಾಡೆಮಿಯು ನೇಚರ್ ಫಸ್ಟ್ ಇಕೋ ವಿಲೇಜ್‌ನಲ್ಲಿ ಬಾಲಮಂದಿರ ಮಕ್ಕಳಿಗಾಗಿ ಏರಿ್ಡಸಿರುವ 15 ದಿನಗಳ ವಸತಿಯುತ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.ಇಂದಿನಿಂದ 15 ದಿನಗಳವರೆಗೆ ರಾಜ್ಯದ 31 ಜಿಲ್ಲೆಗಳ ಬಾಲ ಮಂದಿರ ಮಕ್ಕಳಿಗಾಗಿ ಏರಿ್ಡಸಿರುವ ಮಕ್ಕಳ ವ್ಯಕ್ತಿತ್ವ ವಿಕಸನ ಕಾರ್ಯಾಗಾರವು ನಿಜಕ್ಕೂ ಮಾದರಿಯಾದ ಕಾರ್ಯಕ್ರಮ. ಇಲ್ಲಿ ವಿಶೇಷವಾದ ಸ್ಪೂರ್ತಿಯನ್ನು ಪಡೆದು ನಿಮ್ಮ ಬದುಕನ್ನು ಬದಲಾಯಿಸಿಕೊಳ್ಳಿ ಮತ್ತು ರೂಪಿಸಿಕೊಳ್ಳಿ ಇಂಥ ಪರಿಸರ ಸ್ನೇಹಿ ಸ್ಥಳದಲ್ಲಿ ಮಕ್ಕಳಿಗಾಗಿ ನಿಸರ್ಗದ ಮಡಿಲಲ್ಲಿ ಏರಿ್ಡಸಿರುವ ಈ ಕಾರ್ಯಕ್ರಮ ನಿಜಕ್ಕೂ ಅರ್ಥಪೂರ್ಣವಾದದ್ದು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಮಾತನಾಡಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಆಶಯವು ಈ ನಾಡಿನ ಅವಕಾಶ ವಂಚಿತ ಮಕ್ಕಳ ಬದುಕಿಗೆ ಹೊಸ ಕಾಯಕಲ್ಪ ನೀಡುವುದಾಗಿದೆ. ಅವಕಾಶ ವಂಚಿತ ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎನ್ನುವುದು ನಮ್ಮೆಲ್ಲರ ಸದಾಶಯವಾಗಿದೆ ಎಂದು ಹೇಳಿದರು. ನಾಡಿನ ಮೂಲೆ ಮೂಲೆಯಿಂದ ಪಾಲ್ಗೊಂಡಿರುವ ಮಕ್ಕಳು ಈ ವ್ಯಕ್ತಿತ್ವ ವಿಕಸನ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು. 10 ಜಿಲ್ಲೆಗಳಂತೆ ಮೂರು ತಂಡಗಳನ್ನು ಮಾಡಿ, ಐದು ದಿನಗಳಂತೆ ಒಟ್ಟು 15 ದಿನ ನಡೆಯುವ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಹಲವಾರು ಜನ ಸಾಧಕರನ್ನು ಭೇಟಿ ಮಾಡಲಿದ್ದೀರಿ ಅವರ ಅನುಭವಗಳು ನಿಮ್ಮ ಬಾಳಿಕೆ ಬೆಳಕಾಗಲಿ ಎಂದು ಹಾರೈಸಿದರು.
ಮುಖ್ಯ ಅತಿಥಿಯಾಗಿ ಪರಿಸರವಾದಿ ಪಿ.ವಿ. ಹಿರೇಮಠ ಅವರು ಮಾತನಾಡಿ, ಪರಿಸರವನ್ನು ಉಳಿಸುವ ಪರಿಸರ ಜಾಗೃತಿ ಮೂಡಿಸುವ ಕೆಲಸ ಇಂದಿನ ತುರ್ತು ಅಗತ್ಯವಾಗಿದ್ದು, ಮಕ್ಕಳು ಪರಿಸರ ಪ್ರೇಮವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬೊಮ್ಮಕ್ಕನವರ, ಶಿಕ್ಷಕ ಫಕಿರೇಶ ಮುಡಿಯನ್ನವರ, ಅಕ್ಷರ ದಾಸೋಹದ ಅಧಿಕಾರಿ ಬಸವರಾಜ, ಶಿಕ್ಷಕ ಹಾಗೂ ಸಾಹಿತಿ ಬೆಂತೂರ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅನ್ನಪೂರ್ಣ ಸಂಗಳದ. ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧಿಕಾರಿಗಳಾದ ಪುಷ್ಪ ಹಂಜಗಿ, ಸ್ವರ್ಣ ಲತಾ, ಮೇಟಿ. ಸಂಪನ್ಮೂಲ ವ್ಯಕ್ತಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು. ಮೊದಲ ಹಂತದಲ್ಲಿ 9 ಜಿಲ್ಲೆಗಳ ಬಾಲ ಮಂದಿರದ ಮಕ್ಕಳು ಹಾಗೂ ಕ್ಷೇಮ ಪಾಲಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 