ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಸೇರಿದ ಜಮೀನಿನಲ್ಲಿ ಅಕ್ರಮ ಮನೆ ನಿರ್ಮಾಣ; ಕರ್ನಾಟಕ ದಲಿತ ಸಂಘರ್ಷ ಸಮಿತಿ ವಿರೋಧ
Karnataka Dalit Sangharsh Samiti opposes illegal construction of houses on land belonging to SC, ST
ಶಿಗ್ಗಾವಿ 10 : ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ ಸರ್ಕಾರದಿಂದ ಅಧಿಕೃತವಾಗಿ ಹಕ್ಕು ಪತ್ರ ನೀಡಲಾಗಿರುವ ಜಮೀನಿನಲ್ಲಿ ಕೆಲವರು ಸರ್ಕಾರದಿಂದ ಯಾವುದೇ ಹಕ್ಕು ಪತ್ರ ಪಡೆಯದೇ ಇದ್ದವರು ಆ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದು ಕೂಡಲೇ ಆ ಜಾಗದಿಂದ ತೆರವುಗೊಳಿಸಿ ದಲಿತರಿಗೆ ನ್ಯಾಯ ಒದಗಿಸುವ ಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾವೇರಿ ಜಿಲ್ಲೆ ವತಿಯಿಂದ ತಾಲೂಕಾ ತಹಶೀಲ್ದಾರರ ಮೂಲಕ ಮನವಿ ಅರ್ಿಸಿ ಅಗ್ರಹಿಸಿದರು.
ಹುಣಸಿಕಟ್ಟಿ ಗ್ರಾಮದ ರಿ.ಸ.ನಂ.49/1,49/2,49/3 ಈ ಸರ್ವೇ ನಂಬರ ನಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರದಿಂದ ಮಂಜೂರಾದ ಜಮೀನು ಇದ್ದು ಅವರಿಗೆ ಸರ್ಕಾರದಿಂದ ಅಧಿಕೃತವಾಗಿ ಹಕ್ಕು ಪತ್ರವನ್ನೂ ನೀಡಲಾಗಿರುವ ಜಮೀನಿನಲ್ಲಿ ಸುಮಾರು ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ ಆದರೆ ಇತ್ತೀಚಿಗೆ ಕೆಲವರು ಸರ್ಕಾರದಿಂದ ಯಾವುದೇ ಹಕ್ಕು ಪತ್ರ ಪಡೆಯದೇ ಇದ್ದವರು ಆ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿದ್ದು ಆ ಜಾಗವು ಹುಣಸಿಕಟ್ಟಿ ಗ್ರಾಮದ ದಲಿತರಿಗೆ ಸೇರಿದ ಜಮೀನಾಗಿರುತ್ತದೆ ಅಲ್ಲದೆ ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡ ಮನೆಗಳಿಗೆ ಕೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದಿಂದ ಹಕ್ಕುಪತ್ರವನ್ನು ಪಡೆಯುವ ಹುನ್ನಾರ ನಡದಿದೆ,
ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾವೇರಿ ಇದನ್ನ ಖಂಡಿಸುತ್ತದೆ, ಯಾವುದೇ ಕಾರಣಕ್ಕೂ ಅವರಿಗೆ ಹಕ್ಕು ಪತ್ರಗಳನ್ನು ನೀಡದೆ, ಕೂಡಲೇ ಅವರನ್ನು ಆ ಜಾಗದಿಂದ ತೆರವುಗೊಳಿಸಿ ದಲಿತರಿಗೆ ನ್ಯಾಯ ಒದಗಿಸುವ ಕೊಡಬೇಕೆಂದು ಈ ಮೂಲಕ ಸರ್ಕಾರಕ್ಕೆ ಆಗ್ರಪಡಿಸುತ್ತೇವೆ, ಒಂದು ವೇಳೆ ದಲಿತರಿಗೆ ಅನ್ಯಾಯ ಆದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಉಗ್ರವಾದ ಹೋರಾಟವನ್ನು ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾವೇರಿ ಜಿಲ್ಲೆಯ ಸಂಚಾಲಕ ಸುಭಾಸ ಬೆಂಗಳೂರ, ಪದಾಧಿಕಾರಿಗಳಾದ ನಾಗರಾಜ ಮಾಳಗಿ, ಜಿಲ್ಲಾ ಸಲಹಾ ಸಮಿತಿ ಸದಸ್ಯ ಅಶೋಕ ಮರಿಯಣ್ಣನವರ, ಮಲ್ಲೇಶಪ್ಪ ಕಡುಕೋಳ, ಫಕೀರೇಶ ಹರಿಜನ, ಅಶೋಕ ಹರಿಜನ, ನೀಲಪ್ಪ ಹರಿಜನ, ಗಂಗವ್ವ ಹರಿಜನ ಸೇರಿದಂತೆ ಉಳಿದ ಪದಾಧಿಕಾರಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 