ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ: ಶಿವಾನಂದ ಕಾಮಗೊಂಡ
Karnataka Education Gem Award: Sivananda Kamagonda
ಇಂಡಿ 15: ಸಿ ವ್ಹಿ ರಾಮನ್ ಸಂಸ್ಥೆಯ ಮುಖ್ಯಸ್ಥ ಶಿವಾನಂದ್ ಕಾಮಗೊಂಡ ಇವರಿಗೆ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ ಒಲಿದಿದೆ. ಶಿಕ್ಷಣ ಕ್ಷೇತ್ರದಲ್ಲಿನ ಇವರ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿ ಬೆಂಗಳೂರು ಇವರಿಂದ ಭಾನುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಿ ಪ್ರಶಸ್ತಿಯನ್ನು ವಿತರಿಸಲಾಯಿತು. ಕಳೆದ 24 ವರ್ಷಗಳಿಂದ ನಿರಂತರವಾಗಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾ ದೇಗುಲವನ್ನು ಸಮುದಾಯದೊಂದಿಗೆ ಬೆಳೆಸುತಾ ನಿರಂತರ ಕಾಳಜಿ ಮತ್ತು ಪ್ರೀತಿಯೊಂದಿಗೆ ವಿದ್ಯಾರ್ಥಿಗಳ ಮನದಂಗಳದಲ್ಲಿ ಅಕ್ಷರ ಬೀಜ ಬಿತ್ತುವ ಮೂಲಕ ತಮ್ಮ ಕೆಲಸವನ್ನು ಮಾಡುತ್ತಾ ಬಂದಿರುತ್ತಾರೆ ಇವರು ಮಾಡುವಂತ ಸೇವೆ ಚಿರಸ್ಮರಣೀಯವಾದದ್ದು ಇವರ ಪರಿಶ್ರಮ ದೃಢತೆ ಮತ್ತು ದಕ್ಷತೆ ಇನ್ನೊಂದು ದೊಡ್ಡ ಸಾಧನೆ ಮತ್ತು ಸಂಸ್ಥೆಗೆ ಹೆಚ್ಚಿದ ಗರಿಮೆ ಇವರಿಗೆ ಅಭಿನಂದನೆಗಳು, ಇವರ ಕಾರ್ಯ ಹೀಗೆ ಮುಂದುವರೆಯಲಿ ಸಂಸ್ಥೆಯ ಮುಖ್ಯಸ್ಥರಿಗೆ ಈ ಪ್ರಶಸ್ತಿ ದೊರೆತಿರುವುದು ತುಂಬಾ ಸಂತೋಷವಾಗಿದೆ ಎಂದು ನಿರ್ದೇಶಕ ಮಹಾವೀರ ವರ್ಧಮಾನ್, ಸನ್ಮತಿ ಹಳ್ಳಿ, ಶೈಲೇಶ್ ಬೀಳಗಿ ಹರ್ಷ ವ್ಯಕ್ತಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 