ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು
Karnataka Governor climbs Anjanadri hill in 30 minutes with devotion and determination
ಭಕ್ತಿ ಮತ್ತು ದೃಢಸಂಕಲ್ಪದೊಂದಿಗೆ 30 ನಿಮಿಷದಲ್ಲಿ ಅಂಜನಾದ್ರಿ ಬೆಟ್ಟವೇರಿದ ಕರ್ನಾಟಕದ ರಾಜ್ಯಪಾಲರು
ಕೊಪ್ಪಳ 06 : ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ ಪ್ರಸಿದ್ದಿ ಪಡೆದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟವೇರಿ ಶ್ರೀ ಆಂಜನೇಯ ಸ್ಚಾಮಿ ದರ್ಶನ ಪಡೆದರು.
ಅಂಜನಾದ್ರಿ ಪಾದಗಟ್ಟಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿದ ನಂತರ ಭಕ್ತಿ ಮತ್ತು ದೃಢ ಸಂಕಲ್ಪದೊಂದಿಗೆ ಕುಟುಂಬ ಸದಸ್ಯರ ಜೊತೆಗೆ ಅಂಜನಾದ್ರಿ ಬೆಟ್ಟದ 575 ಮೆಟ್ಟಿಲುಗಳನ್ನು 30 ನಿಮಿಷದಲ್ಲಿ ಏರಿದರು. ನಂತರ ಶ್ರೀ ಆಂಜನೇಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ರಾಜ್ಯಪಾಲರನ್ನು ಸನ್ಮಾನಿಸಲಾಯಿತು. ನಂತರ ಗೌರವಾನ್ವಿತ ರಾಜ್ಯಪಾಲರು 20 ನಿಮಿಷದಲ್ಲಿ ಬೆಟ್ಟವನ್ನು ಇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್.ಅರಸಿದ್ದಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಕೊಪ್ಪಳ 06 : ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಸಹಾಯಧನಕ್ಕಾಗಿ ಆಸಕ್ತ ರೈತರು, ಸಂಘ ಸಂಸ್ಥೆಗಳು ಹಾಗೂ ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ರೈತರಿಗೆ ವಿತರಿಸುವ ಉದ್ದೇಶದಿಂದ ಕೊಪ್ಪಳ ಜಿಲ್ಲೆಗೆ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ 2 ಮತ್ತು ಸಂಘ ಸಂಸ್ಥೆಗಳಿಗೆ 1 ಸೇರಿ ಒಟ್ಟು 3 ಕಂಬೈನ್ಡ್ ಹಾರ್ವೆಸ್ಟರ್ ಹಬ್ (ಅಠಛಟಿಜಜ ಊಚಿಡಿತಣಠ ಣಛ) ಕ್ರೀಯಾ ಯೋಜನೆ ಅನುಮೋದನೆಗೊಂಡಿರುತ್ತದೆ. ಈ ಹಬ್‌ನಲ್ಲಿ ಕಡ್ಡಾಯವಾಗಿ ಕಡ್ಡಾಯವಾಗಿ ಬೈನ್ಡ್ ಹಾರ್ವೆಸ್ಟರ್ ಮತ್ತು ಟ್ರ್ಯಾಕ್ಟರ್ ಆಪರೇಟೆಡ್ ಬೇಲರ್ಸ ಇರಬೇಕು. ಈ ಯೋಜನೆಯಡಿ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ ಗರಿಷ್ಠ 40 ಲಕ್ಷ (50ಅರ ಸಹಾಯಧನ) ಮತ್ತು ಸಂಘ ಸಂಸ್ಥೆಗಳಿಗೆ ಗರಿಷ್ಠ 50 ಲಕ್ಷ (70ಅ ಸಹಾಯಧನ )ಇರುತ್ತದೆ. ಆದ ಕಾರಣ ಆಸಕ್ತ ರೈತರು, ಸಂಘ ಸಂಸ್ಥೆಗಳು, ರೈತ ಉತ್ಪಾದಕ ಸಂಸ್ಥೆ (ಎಫ್.ಪಿ.ಐ), ಕೃಷಿ ಯಂತ್ರೋಪಕರಣಗಳ ಬ್ಯಾಂಕ್ (ಎಫ್.ಎಂ.ಬಿ) ಅಥವಾ ಕೃಷಿ ಯಂತ್ರಧಾರೆ ಕೇಂದ್ರಗಳು (ಸಿ.ಹೆಚ್.ಎಸ್.ಸಿ)ಗಳು ಅರ್ಜಿಯನ್ನು ನಿಗಧಿತ ನಮೊನೆಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 20 ರೊಳಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬೇಕು.
ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಗಳನ್ನು ಪರೀಶೀಲಿಸಿ ಉಪಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಲಾಗುವುದು. ನಂತರ ಈ ಕಛೇರಿಯಲ್ಲಿ ಉಪಕೃಷಿ ನಿರ್ದೇಶಕರ ಕಛೇರಿಯಿಂದ ಸ್ವಿಕೃತಗೊಂಡ ಅರ್ಜಿಗಳನ್ನು ಪರೀಶೀಲಿಸಿ ಜಿಲ್ಲಾ ಮಟ್ಟದ ಉಪಕರಣ ಸಮಿತಿಯಲ್ಲಿ ಮಂಡಿಸಲಾಗುವುದು. ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಒಂದೇ ಹಬ್‌ಗೆ ಒಂದಕ್ಕಿಂತ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿ ಅರ್ಹಗೊಂಡಲ್ಲಿ, ಲಾಟರಿ ಮುಖಾಂತರ ಫಲಾನುಭವಿಯನ್ನು ಆಯ್ಕೆ ಮಾಡುವುದು. ಈ ಕಛೇರಿಯಿಂದ ಆಯ್ಕೆಯಾದ ಫಲಾನುಭವಿಗೆ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನಿಕರಿಸಲು ಕಾರ್ಯಾದೇಶ ನೀಡಲಾಗುವುದು. ಹಬ್‌ವಾರು ಸ್ವೀಕೃತವಾದ ಯಂತ್ರೋಪಕರಣಗಳನ್ನು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪರೀಶೀಲಿಸಿ, ಸಹಾಯಧನವನ್ನು ನಿಯಾಮನುಸಾರ ಸಂಬಂಧಿಸಿದವರ ಸಾಲದ ಬ್ಯಾಂಕ್ ಖಾತೆಗೆ ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಜಮಾ ಮಾಡಲಾಗುವುದು.
ಫಲಾನುಭವಿ ಅಥವಾ ಸಂಘ ಸಂಸ್ಥೆ ಅರ್ಜಿಯೊಂದಿಗೆ ಸಲ್ಲಿಸಬೇಕಾದ ವಿವರ: ಸಂಸ್ಥೆಯಾದಲ್ಲಿ ಸಹಕಾರ ಸಂಘಗಳ ನಿಬಂಧನೆಯಂತೆ ಸಂಸ್ಥೆ ನೊಂದಾಯಿಸಿರುವ ಬಗ್ಗೆ ಪ್ರಮಾಣ ಪತ್ರ. ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ, ಆಧಾರ ಕಾರ್ಡ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಎಫ್.ಐ.ಡಿ ಸಂಖ್ಯೆ. ರೂ 100 ಚಾಫಾ ಕಾಗದದ ಮೇಲೆ ಹಬ್‌ನ್ನು ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ (ನೋಟರಿಯೊಂದಿಗೆ). ಇತ್ತೀಚಿನ 2 ವರ್ಷಗಳ (2023-24 ಮತ್ತು 2024-25) ಲೆಕ್ಕ ಪರಿಶೋಧನಾ ಪತ್ರ. ಸಹಾಯ ಧನವು ಕ್ರೆಡಿಟ್ ಲಿಂಕ್ಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಆಗಿರುವುದರಿಂದ ಸಂಬಂಧಿಸಿರುವ ಬ್ಯಾಂಕ್ ನಿಂದ ತಾತ್ವಿಕ ಸಾಲ ಮಂಜೂರಾತಿ ಪತ್ರವನ್ನು (ಋ ಕಡಿಟಿಛಿಠಿಟಜ ಐಠಟಿ ಖಚಿಟಿಛಿಣಠ ಐಜಣಣಜಡಿ) ಕಡ್ಡಾಯವಾಗಿ ರಾಷ್ಟ್ರೀಕೃತ ಅಥವಾ ಶೆಡ್ಯುಲ್ಡ್ ಬ್ಯಾಂಕ್ (ಓಚಿಣಠಚಿಟದಜಜ ಃಚಿಟಿಞ/ಖಛಿಜಜಣಟಜಜ ಃಚಿಟಿಞ)ಗಳಿಂದ ಪಡೆಯುವಂತೆ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 