ಫೆ.8 ರಂದು ಕರ್ನಾಟಕ ಮುಲ್ಲಾ ಅಸೋಸಿಯೇಷನ್ ರಾಜ್ಯ ಮಟ್ಟದ ಬೃಹತ್ ಸಮಾವೇಶ
ವಿಜಯಪುರ 06: ದಿನಾಂಕ 08ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಶ್ರೀ ಕಂದಗಲ್ ಹನಮಂತರಾಯ ರಂಗ ಮಂದಿರ ಸ್ಟೇಶನ್ ರೋಡ್, ವಿಜಯಪುರದಲ್ಲಿ ಕರ್ನಾಟಕ ಮುಲ್ಲಾ ಅಸೋಸಿಯೇಷನ್(ರಿ) ಬೆಂಗಳೂರು ವತಿಯಿಂದ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಲಹಾ ಸಮಿತಿ ಉಪಾಧ್ಯಕ್ಷರಾದ ಎಂ.ಸಿ. ಮುಲ್ಲಾ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕಲಬುರಗಿ ಸಜ್ಜಾದೆನಷೀನ ಬಂದೇನವಾಜ ದರ್ಗಾದ ಸೈಯ್ಯದ ಮಹ್ಮದ ಅಲಿ ಅಲ್ - ಹುಸೇನ್ , ಕರ್ನಾಟಕ ಅಹ್ಲೆ ಸುನ್ನತ್ ಜಮಾತ್ ವಿಜಯಪುರ ರಾಜ್ಯ ಅಧ್ಯಕ್ಷರಾದ ಹಜರತ್ ಸೈಯ್ಯದ ಮಹ್ಮದ ತನ್ವೀರ ಪೀರಾ ಹಾಶ್ಮಿ, ಬಾಗಲಕೋಟ ಕಿಬ್ಲಾ ಗುಳೇದಗುಡ್ಡದ ಸರ್ಕಾರ್ ಮುಪ್ತಿ ಮೊಹ್ಮದ ಅಬೂಬಕರ್ ಆಶ್ರಫಿ ಖಾದ್ರಿ ಸಾಹೇಬ್, ತಾಳಿಕೋಟಿಯ ಖಾಸ್ಗತೇಶ್ವರ ಮಠದ ಪರಮ ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಮನಗೂಳಿಯ ಹಜರತ್ ಸೈಯದಶಾ ಹುಶೇನಿ ಫೀರ ಕಾದ್ರಿ ಪೀಠಾಧಿಪತಿಗಳಾದ ಪ. ಪೂ. ಫೈರೋಜ ಹುಸೀನಿ ವಹಿಸಿಕೊಳ್ಳಲಿದ್ದಾರೆ.
ಕಾರ್ಯಕ್ರಮವನ್ನು ಸಚಿವಾಲಾಯದ ಮಾನ್ಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಉದ್ಘಾಟಕರಾಗಿ ಆಗಮಿಸಲಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ.ಪಾಟೀಲ ಅವರು ಧ್ವಜಾ ಅನಾವರಣಗೊಳಿಸಲಿದ್ದಾರೆ.
ಬೆಳಗಾವಿ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೋಳಿ ಕೆ.ಎಂ.ಎ.ಲೋಗೋ ಬಿಡುಗಡೆಗೊಳಿಸಲಿದ್ದಾರೆ.
ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಮತ್ತು ಸಕ್ಕರೆ ಜವಳಿ ಸಚಿವರಾದ ಶಿವಾನಂದ ಪಾಟೀಲ ಅವರು ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ವಿತರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುದ್ದೇಬಿಹಾಳ ಶಾಸಕ ಅಪ್ಪಾಜಿ ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಪಾಟೀಲ ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಿಶೇಷ ವ್ಯಕ್ತಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು. ಕಾರ್ಯಕ್ರಮದ ನಿರೂಪಣೆಯನ್ನು ಖುಧಾನಸಾಬಜೆ.ಮುಲ್ಲಾ, ಕಬೂಲ್ ಕೊಕಟನೂರ ಮಾಡಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಮುಲ್ಲಾ ತಿಳಿಸಿದ್ದಾರೆ.