ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
Karnataka Press Club Taluka Office Bearers Selection
ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕಾ ಪದಾಧಿಕಾರಿಗಳ ಆಯ್ಕೆ
ಜಮಖಂಡಿ 13: ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಜಿಎಲ್‌ಬಿಸಿ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ಅವರ ನೇತೃತ್ವದಲ್ಲಿ ರಚನೆ ಮಾಡಲಾಯಿತು. ನೂತನವಾಗಿ ಆಯ್ಕೆಗೊಂಡ ಸುರೇಶ ಭಸ್ಮೆ ಅವರನ್ನು ತಾಲೂಕಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆಂದು ಜಿಲ್ಲಾ ಉಸ್ತುವಾರಿ ಶಶಿಕಾಂತ ತೇರದಾಳ ತಿಳಿಸಿದರು. ಮುಧೋಳ ತಾಲೂಕಿನ ಕರ್ನಾಟಕ ಪ್ರೆಸ್ ಕ್ಲಬ್ ಶಾಖೆಯ ನೂತನ ಅಧ್ಯಕ್ಷ ಸುರೇಶ ಭಸ್ಮೆ, ಉಪಾಧ್ಯಕ್ಷ ಲಾಲಸಾಬ ನಧಾಪ ಮತ್ತು ಅನೀಲ ಬರಗಿ, ಪ್ರಧಾನ ಕಾರ್ಯದರ್ಶಿ ದಾದಾಪೀರ ಸುರನಾಸಿ, ಸಹ ಕಾರ್ಯದರ್ಶಿ ವಿಜಯ ಪವಾರ, ಖಜಾಂಚಿ ಉಮೇಶ ಶಿಂಧೆ, ಸಂಘಟನಾ ಕಾರ್ಯದರ್ಶಿ ಮಹೇಶ ದೇಮಶೆಟ್ಟಿ, ಸಹ ಸಂಘಟನಾ ಕಾರ್ಯದರ್ಶಿ ಮೃತುಂಜ್ಯಯ ಹಿರೇಮಠ, ಸದಸ್ಯರಾಗಿ ನಾಮದೇವ ಕೋರೆ್ಡ ಅವರನ್ನು ಮುಧೋಳ ತಾಲೂಕಾ ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ಮಾಡಲಾಯಿತು ಎಂದರು. ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಮಿತಿ ಹಾಗೂ ಬಾಗಲಕೋಟ ಜಿಲ್ಲೆಯಿಂದ ಮುಧೋಳದಲ್ಲಿ ನೂತನವಾಗಿ ಆಯ್ಕೆಗೊಂಡ ಸಮಿತಿಗೆ ಅಭಿನಂದನೆಗಳನ್ನು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 