ಬ್ಯಾಡಗಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆಗೆ ನಿರ್ಧಾರ

ಬ್ಯಾಡಗಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆಗೆ ನಿರ್ಧಾರ Karnataka Rajyotsava to be celebrated on a grand scale in Byadgi

ಬ್ಯಾಡಗಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆಗೆ ನಿರ್ಧಾರ

ಬ್ಯಾಡಗಿ 25 : ತಾಲ್ಲೂಕು ಆಡಳಿತ ,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ಕನ್ನಡಪರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನ. 1 ರಂದು ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ  ಕರ್ನಾಟಕ ರಾಜ್ಯೋತ್ಸವವನ್ನು ಒಗ್ಗಟ್ಟಿನಿಂದ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಶೀಲ್ದಾರ ಚಂದ್ರಶೇಖರ ನಾಯ್ಕ ಹೇಳಿದರು.ಅವರು ಶುಕ್ರವಾರ ಪಟ್ಟಣದ ತಹಸೀಲ್ದಾರ ಸಭಾ ಭವನದಲ್ಲಿ  ನಡೆದ ಕನ್ನಡ ರಾಜ್ಯೊ?ತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸ ಮಾತನಾಡಿದರು. ನ. 1 ರಂದು ಪಟ್ಟಣದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರದೊಂದಿಗೆ   ಶಾಲಾ  ವಿದ್ಯಾರ್ಥಿಗಳೊಂದಿಗೆ ಭವ್ಯವಾದ ಮೆರವಣಿಗೆಯನ್ನು ನಡೆಸಲಾಗುವುದು. ಎಲ್ಲ ಇಲಾಖೆಗಳ ಅಧಿಕಾರಿ ವರ್ಗ ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ  ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಹಾಗೆಯೇ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ರಾಜ್ಯೊತ್ಸವ ಆಚರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಮಲ್ಲಿಕಾರ್ಜುನ ಮಾತನಾಡಿ ಪ್ರತಿ ವರ್ಷದ ಪದ್ಧತಿಯಂತೆ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆಯು ಬೆಳಿಗ್ಗೆ ಸುಭಾಸ ವೃತ್ತದಿಂದ  ಆರಂಭವಾಗಲಿದೆ. ಮೆರವಣಿಗೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕಿದೆ. ಮುಂಜಾನೆ 9 ಘಂಟೆಗೆ ತಾಲೂಕಾ ಕ್ರಿಡಾಂಗಣದಲ್ಲಿ ಕಾರ್ಯಕ್ರಮ ಜರುಗಲಿವೆ.ಎಲ್ಲ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು. ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ.ಜಗಾಪುರ, ವಿವಿಧ ಕನ್ನಡಪರ ಸಂಘಟನೆಗಳ ಚಂದ್ರು ಗದಗಕರ, ಫರಿದಾಬಾನು ನದಿಮುಲ್ಲಾ, ಹನುಮಂತಪ್ಪ ಭೊವಿ ಮಾತನಾಡಿ,ರಾಜ್ಯೊ?ತ್ಸವ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸುತ್ತೆ?ವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕಾ ಅಧಿಕಾರಿಗಳಾದಸುರೇಶ ಬೇಡರ,ಪ್ರಕಾಶ ಅಂಗಡಿ, ಎಸ್‌.ಬಿ.ಗೌಡರ, ಪ್ರಶಾಂತ ನವಲೆ, ಶಂಕ್ರಣ್ಣ ಹವಳಮ್ಮನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.