ನಿಯಮ ಬಾಹೀರ ವಾಹನ ಸಂಚಾರ ತಡೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಮನವಿ
Karnataka Rakshana Vedike appeals to stop illegal vehicle movement
ಶಿರಹಟ್ಟಿ 21 : ತಾಲೂಕಿನಾದ್ಯಾಂತ ಹಲವಾರು ಖಾಸಗಿ ಶಾಲೆಗಳಿದ್ದು, ಅದರಲ್ಲಿ ಕೆಲವು ಖಾಸಗಿ ಶಾಲಾ ವಾಹನಗಳಲ್ಲಿ ಸೀಟುಗಳ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಮಕ್ಕಳನ್ನು ತುಂಬಿಕೊಂಡು ಹೋಗಿರುತ್ತಿರುವದನ್ನು ನಿಯಂತ್ರಿಸುವಂತೆ ಒತ್ತಾಯಿಸಿ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ತಹಶೀಲ್ದಾರ ಕೆ ರಾಘವೇಂದ್ರರಾವ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಶಿರಹಟ್ಟಿ ನಗರ ಘಟಕದ ಅಧ್ಯಕ್ಷ ಮಾಬುಸಾಬ ಢಾಲಾಯತ್ ಮಾತನಾಡುತ್ತಾ, ಇತ್ತೀಚೆಗೆ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಿಂದ ಶಾಲಾ ಮಕ್ಕಳನ್ನು ವಾಹನದಲ್ಲಿ ಲಕ್ಷ್ಮೇಶ್ವರ ಖಾಸಗಿ ಶಾಲೆಯೊಂದಕ್ಕೆ ಕರೆದೊಯ್ದುವ ಸಮಯದಲ್ಲಿ ಮಗುವೊಂದು ಬಿದ್ದು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಡೆದಿದೆ. ಕೆಲವು ಶಾಲಾ ವಾಹನಗಳಿಗೆ ಇನ್ಸೂರೆನ್ಸ್ ಇರುವದಿಲ್ಲಾ ಪ್ರತಿಯೊಂದು ಶಾಲಾ ವಾಹನದಲ್ಲಿ ಮಕ್ಕಳನ್ನು ಗಮಿಸುವಂತೆ ಒಬ್ಬನನ್ನು ನೇಮಿಸುವಂತೆ ನಿಯಮವಿದೆ. ಅದನ್ನು ಗಾಳಿಗೆ ತೂರಿ ಖಾಸಗಿ ಶಾಲಾ ವಾಹನಗಳು ನಿಯಮ ಬಾಹೀರವಾಗಿ ಸಂಚಾರ ನಡೆಸುತ್ತಿವೆ. ಅಂತವರ ವಿರುದ್ಧ ತಾಲೂಕಾ ದಂಢಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಕರವೇ ತಾಲೂಕು ಗೌರವ ಘಟಕದ ಅಧ್ಯಕ್ಷ ಅಶೋಕ ಹುಬ್ಬಳ್ಳಿ, ಮಹಮ್ಮಶಫಿ ಹೆಸರೂರ, ಮಂಜುನಾಥ ಹುಬ್ಬಳ್ಳಿ, ಪ್ರಕಾಶ ಹುಬ್ಬಳ್ಳಿ, ಪ್ರವೀಣ ಕುರಿ ಹಾಗೂ ಅನೇಕ ಕಾರ್ಯಕರ್ತರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 