22 ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭ - ಎಲ್‌. ಎನ್‌. ಮುಕುಂದರಾಜ್ಕೊ

Karnataka Sahitya Akademi Award Ceremony on 22nd - L. N. Mukundarajko

22 ರಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭ - ಎಲ್‌. ಎನ್‌. ಮುಕುಂದರಾಜ್ಕೊ 

ಕೊಪ್ಪಳ 20  : ಸಾಹಿತ್ಯ ಅಕಾಡೆಮಿ ಇಡೀ ಕರ್ನಾಟಕಕ್ಕೆ ಸೇರಿದ್ದು ಅದರ ಕಾರ್ಯ ಚಟುವಟಿಕೆಗಳನ್ನು ಇಡೀ ರಾಜ್ಯಾದ್ಯಂತ ವಿಸ್ತರಿಸಬೇಕು ಕೇವಲ  ಬೆಂಗಳೂರಿನಲ್ಲಿ ಕುಳಿತುಕೊಂಡರೆ ಆಗುವುದಿಲ್ಲ ಎಲ್ಲ  ಜನರನ್ನು ತಲುಪಬೇಕಿದೆ ಕನ್ನಡ ಸಾಹಿತ್ಯದ ನಿಜವಾದ ಮೌಲ್ಯವನ್ನು ಎಲ್ಲರಿಗೂ ತಲುಪಿಸಬೇಕಿದೆ  ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿಯ ಅಧ್ಯಕ್ಷ ಹಿರಿಯ ಸಾಹಿತಿ ಎಲ್ ಎನ್ ಮುಕುಂದರಾಜ್ ಹೇಳಿದರು.   ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು   ಕಳೆದ ಸಾವಿರ ವರ್ಷಗಳಿಂದ ಕನ್ನಡದಲ್ಲಿ ರೂಪಿಸುವುದಕ್ಕಾಗಿ ಬರವಣಿಗೆಯನ್ನು ಮಾಡಿದ್ದಾರೆ.  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಪೀಠಿಕೆಯಲ್ಲಿ ಹೇಳಿರುವ ಭಾರತೀಯ ಪ್ರಜೆಗಳಾದ ನಾವು ಯಾವ ರೀತಿ ಇರಬೇಕು ಎನ್ನುವ ಮೌಲ್ಯಗಳನ್ನು ಕಳೆದ ಒಂದು ಸಾವಿರ ವರ್ಷಗಳಿಂದ ಕನ್ನಡದ ಸಾಹಿತ್ಯ ಪ್ರತಿಪಾದಿಸುತ್ತಾ ಬಂದಿದೆ. ಈ ಮೌಲ್ಯಗಳನ್ನು ಹೆಕ್ಕಿ ಜನರಿಗೆ ತಲುಪಿಸುವ ಕೆಲಸವನ್ನು ಸಾಹಿತ್ಯ ಅಕಾಡೆಮಿ ಮಾಡುತ್ತಿದೆ.  22ರಂದು ನಡೆಯುವ ಕಾರ್ಯಕ್ರಮಕ್ಕೆ ಇಡೀ ಕರ್ನಾಟಕದಿಂದ ಪ್ರಶಸ್ತಿ ಪುರಸ್ಕೃತ ಲೇಖಕರು ಕೊಪ್ಪಳಕ್ಕೆ ಆಗಮಿಸಲಿದ್ದಾರೆ ನಗರದ ಶಿವ ಶಾಂತವೀರ ಕಲ್ಯಾಣ ಮಂಟಪದಲ್ಲಿ 22ರಂದು ಸಾಯಂಕಾಲ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಐದು ಜನರಿಗೆ ಗೌರವ ಪ್ರಶಸ್ತಿ 10 ಜನರಿಗೆ ಸಾಹಿತ್ಯ ಶ್ರೀ ಪ್ರಶಸ್ತಿ ನೀಡಲಾಗುತ್ತಿದೆ. ಪುಸ್ತಕ ಹಾಗೂ ದತ್ತಿ ಪ್ರಶಸ್ತಿಗಳನ್ನು ಸಹ ಇದೇ ಸಂದರ್ಭದಲ್ಲಿ ಪ್ರಧಾನ ಮಾಡಲಾಗುವುದು.  ಕಾರ್ಯಕ್ರಮದಲ್ಲಿ ಸಾಹಿತ್ಯ ಸಕ್ತರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಸಾಹಿತ್ಯ ಅಕಾಡೆಮಿ ಸದಸ್ಯರಾದ ಅಜ್ಮೀರ್ ನಂದಾಪುರ, ಹಿರಿಯ ಲೇಖಕಿ ಪಿ ಚಂದ್ರಿಕಾ ರಜಿಸ್ಟರ್ ಕರಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಾಳ್  ಉಪಸ್ಥಿತರಿದ್ದರು.