ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ
ಹೊಸಪೇಟೆ 09: ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಭಾ.ಆ.ಸೇ., ಇವರು ಹಾಗೂ ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ನೊಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ, ಭಾ.ಆ.ಸೇ., ರವರು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ-2025ನ್ನು ಎ. 09ರಂದು ಉದ್ಘಾಟಿಸಿದರು.
ಕ್ರೀಡಾ ಜ್ಯೋತಿ, ಕ್ರೀಡಾ ಧ್ವಜಾರೋಹಣವನ್ನು ಹಾಗೂ ಧ್ವಜವಂದನೆ ಸ್ವೀಕರಿಸಿದರು. ಜಿಲ್ಲಾಧಿಕಾರಿಗಳು ಸರ್ಕಾರ ನೌಕರರ ಕ್ರೀಡಾಕೂಟಕ್ಕೆ ಶುಭ ಹಾರೈಸಿ ಬಿರು ಬಿಸಿಲಿನಲ್ಲಿ ಎಚ್ಚರಿಕೆಯಿಂದ ಆಟವಾಡಲು ತಿಳಿಸಿದರು. ಸ್ವತಃ ಕ್ರೀಡಾಪಟುಗಳಾದ ಜಿಲ್ಲಾ ಕಾರ್ಯವಣಾಧಿಕಾರಿಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಎಲ್ಲರೂ ತಮ್ಮ ಜೀವನದಲ್ಲಿ ಕ್ರೀಡೆಗೆ ಅತ್ಯುತ್ತಮವಾದ ಸ್ಥಾನವನ್ನು ನೀಡಬೇಕೆಂದು ತಿಳಿಸಿದರು.
ವಿಜಯನಗರ ಜಿಲ್ಲೆಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷರಾದ ಜಿ. ಮಲ್ಲಿಕಾರ್ಜುನಗೌಡ, ರಾಜ್ಯ ಪರಿಷತ್ ಸದಸ್ಯರಾದ ರಾಘವೇಂದ್ರ, ಜಿಲ್ಲಾ ಖಜಾಂಚಿಗಳಾದ ಕೆ. ಮಲ್ಲೇಶಪ್ಪ, ಜಿಲ್ಲಾ ಕಾರ್ಯದರ್ಶಿಗಳಾದ ಟಿ. ಪಂಪಣ್ಣ ಹಾಗೂ ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲೆಯ ತಾಲೂಕುಗಳ ಕರ್ನಾಟಕ ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷರು ರಾಜ್ಯ ಪರಿಷತ್ ಸದಸ್ಯರು ಹಾಗೂ ಸರ್ವ ಪದಾಧಿಕಾರಿಗಳು ಮತ್ತು ಜಿಲ್ಲೆಯ ವಿವಿಧ ಭಾಗದಿಂದ ನೌಕರರು ಭಾಗವಹಿಸಿದ್ದರು.