ಶಿಕ್ಷಕ ಶರ್ಮಾಗೆ ಕರ್ನಾಟಕ ವಿದ್ಯಾಭೂಷಣ ರಾಜ್ಯ ಪ್ರಶಸ್ತಿ ಪ್ರದಾನ
ಇಂಡಿ 31: ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ 2024-25 ನೇ ಸಾಲಿನಲ್ಲಿ ಕೊಡಮಾಡುವ ’ಕರ್ನಾಟಕ ವಿದ್ಯಾಭೂಷಣ ರಾಜ್ಯ ಪ್ರಶಸ್ತಿ’ಯನ್ನು ತಾಲೂಕಿನ ಬಂಥನಾಳ ಗ್ರಾಮದ ಕೆ ಬಿ ಎಂ ಪಿ ಎಸ್ ಶಾಲೆಯ ಹಿರಿಯ ಮುಖ್ಯ ಶಿಕ್ಷಕ ಶರಣಪ್ಪ ಡಿ ಶರ್ಮಾ ಅವರಿಗೆಅಕಾಡೆಮಿ ಅಧ್ಯಕ್ಷ ಕಿಶನ್ ಸುರ್ವೆ ಪ್ರದಾನ ಮಾಡಿದರು.ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರಳವಾಗಿ ಸಮಾರಂಭ ಆಯೋಜಿಸಲಾಗಿತ್ತು. ಈ ಸರಳ ಸಮ್ಮೇಳನದಲ್ಲಿ ಈ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು ಎಂದು ಅಕಾಡೆಮಿ ಸ್ಥಾಪಕ ಅಧ್ಯಕ್ಷ ರಮೇಶ ಸುರ್ವೆ ತಿಳಿಸಿದ್ದಾರೆ.ಪ್ರಶಸ್ತಿ ಪುರಸ್ಕೃತ ಹಿರಿಯ ಮುಖ್ಯಶಿಕ್ಷಕ ಶರಣಪ್ಪ ಡಿ ಶರ್ಮಾ ಅವರ ಈ ಸಾಧನೆಗಾಗಿ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ, ಶಿಕ್ಷಕ ಸಂತೋಷ ಬಂಡೆ, ಬಂಥನಾಳ ಕೆ ಬಿ ಎಂ ಪಿ ಎಸ್ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.