ನವದೆಹಲಿ 23: ಕಾಶ್ಮೀರ ವಿವಾದದ ಬಗ್ಗೆ ಮಧ್ಯಸ್ಥಿಕೆ ವಹಿಸಲು ಸಿದ್ದ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಗೆ ಭಾರತ ಎಂದಿಗೂ ತಲೆಬಾಗಬಾರದು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಂಗಳವಾರ ಹೇಳಿದ್ದಾರೆ.
ಸದನದಲ್ಲಿ ಈ ವಿಷಯ ವಿಷಯವನ್ನು ಪ್ರಸ್ತಾಪ ಮಾಡಿದ ಅವರು ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸದನದಲ್ಲಿ ಸ್ಪಷ್ಟಣೆ ನೀಡಬೇಕು ಎಂದು ಅವರು ಆಗ್ರಹಪಡಿಸಿದರು. ಕಾಶ್ಮಿರ ವಿಷಯ ದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ದವಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ ವಿಷಯ ಸದಸದಲ್ಲಿ ಚಚರ್ೆಗೆ ಗ್ರಾಸವಾಗಿದೆ. ಅಮೆರಿಕ ಸೇರಿದಂತೆ ಯಾವುದೇ ಅಂತಾರಾಷ್ಟ್ರೀಯ ವೇದಿಕೆಗೂ ಅವಕಾಶ ಕೊಡಬಾರದು ಎಂದು ಅವರು ಹೇಳಿದರು.
ಭಾರತ ಅಥವಾ ಅಮೆರಿಕದ ಮುಂದೆ ಯಾವುದೇ ತಲೆಬಾಗಲು ಸಾಧ್ಯವಿಲ್ಲ ಎಂಬುದಾದರೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಕೂಡಲೇ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು. ಭಾರತ"ದುರ್ಬಲ ದೇಶವಲ್ಲ" ಎಂದು ಹೇಳಿದರು ಅದರೂ ಸ್ಪೀಕರ್ ಓಂ ಬಿಲರ್ಾ ಅವರು ಈ ವಿಷಯವು ಗಂಭೀರವಾಗಿದ್ದು ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ಶೂನ್ಯವೇಳೆಯಲ್ಲಿ ಪ್ರಸ್ತಾಪ ಮಾಡಲು ಸದಸ್ಯರಿಗೆ ಅವಕಾಶ ನೀಡುವುದಾಗಿ ಹೇಳಿದರು.
ಯಾವುದೇ ಸದಸ್ಯರು ಅಥವಾ ಪಕ್ಷವು ಇದರ ಬಗ್ಗೆ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಬಾರದು ಎಂದು ಅವರು ಹೇಳಿದರು. ಈ ಸಮಯದಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, "ಪ್ರತಿಪಕ್ಷದ ಸದಸ್ಯರು ಈ ವಿಷಯದ ಬಗ್ಗೆ ಚರ್ಚೆಗೆ ಕಾಳಜಿ ವಹಿಸಿದ್ದರೆ ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ಪ್ರಸ್ತಾಪ ಮಾಡಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಸದಸ್ಯರ ಪ್ರಶ್ನೆಗಳಿಗೆ ಸೂಕ್ತ ಉತ್ತರ ಕೊಡಲಿದ್ದಾರೆ ಎಂದರು.