ಕಾಟಾಪುರ: ಅಪರಾಧ ತಡೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮ
Katapura: Crime Prevention Month awareness programme
ಹನುಮಸಾಗರ 28: ಸಮೀಪದ ಕಾಟಾಪುರದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮಕ್ಕೆ ಹನುಮಸಾಗರ ಪೊಲೀಸ್ ಠಾಣಾಧಿಕಾರಿ ಬಸಪ್ಪ ಹಾಗೂ ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು.ಈ ವೇಳೆ ಮಾತನಾಡಿದ ಠಾಣಾಧಿಕಾರಿ ಬಸಪ್ಪ ಅವರು, ಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟಲು ಮಕ್ಕಳಲ್ಲಿಯೇ ಕಾನೂನು ಅರಿವು ಬೆಳೆಸುವುದು ಅತ್ಯಂತ ಅಗತ್ಯವೆಂದು ಹೇಳಿದರು.
ವಿದ್ಯಾರ್ಥಿಗಳು ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಂದ ದೂರವಿದ್ದು ಶಿಸ್ತುಬದ್ಧ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ಅಪರಿಚಿತರೊಂದಿಗೆ ಅತಿಯಾದ ಸ್ನೇಹ, ಸಾಮಾಜಿಕ ಜಾಲತಾಣಗಳ ದುರುಪಯೋಗ ಮತ್ತು ಅನಗತ್ಯ ಮಾಹಿತಿಯ ಹಂಚಿಕೆಯಿಂದ ದೂರವಿರುವಂತೆ ಎಚ್ಚರಿಕೆ ನೀಡಿದರು. ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಅವರು ಪೋಕ್ಸೋ ಕಾಯ್ದೆ ಕುರಿತು ವಿವರವಾಗಿ ಮಾಹಿತಿ ನೀಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವನ್ನು ತಡೆಯುವ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದರು. ಯಾವುದೇ ಅಸಹಜ ವರ್ತನೆ, ದೌರ್ಜನ್ಯ ಅಥವಾ ಭಯ ಹುಟ್ಟಿಸುವ ಘಟನೆಗಳ ಬಗ್ಗೆ ಮಕ್ಕಳು ತಕ್ಷಣವೇ ಪಾಲಕರು, ಶಿಕ್ಷಕರು ಅಥವಾ ಪೊಲೀಸರಿಗೆ ತಿಳಿಸಬೇಕು ಎಂದು ಹೇಳಿದರು.
ಪೋಕ್ಸೋ ಕಾಯ್ದೆಯಡಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗಳಿವೆ ಎಂಬುದನ್ನೂ ಅವರು ವಿವರಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರ ಶಿವಕುಮಾರ್ ಚಳಚಗುಡ್ಡ, ಶಿಕ್ಷಕ ಮಂಜುನಾಥ ಸಿನ್ನೂರ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಅಪರಾಧ ತಡೆಗೆ ಸಹಕರಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 