ಮಕ್ಕಳನ್ನು ಮೊಬೈಲ್ ಟಿವಿ ಯಿಂದ ದೂರವಿಡಿ : ಡಿ.ವೈ.ಎಸ್.ಪಿ ಗೋಪಾಲಕೃಷ್ಣ ಗೌಡರ
Keep children away from mobile TV: DySP Gopalakrishna Gowda
ಚಿಕ್ಕೋಡಿ 24 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಸ್ತು, ನೈತಿಕ ಮೌಲ್ಯಗಳು ಹಾಗೂ ಸಂಸ್ಕಾರಗಳು ಅತ್ಯಗತ್ಯವಾಗಿದ್ದು, ಪಾಲಕರು ತಮ್ಮ ಮಕ್ಕಳನ್ನು ಮೊಬೈಲ್ ಮತ್ತು ಟಿ.ವಿ. ಗಳಿಂದ ದೂರವಿಟ್ಟು ಅಧ್ಯಯನ ಹಾಗೂ ಸೃಜನಾತ್ಮಕ ಚಟುವಟಿಕೆಗಳತ್ತ ಗಮನ ಹರಿಸಬೇಕೆಂದು ಚಿಕ್ಕೋಡಿ ಡಿ.ವೈ.ಎಸ್.ಪಿ ಗೋಪಾಲಕೃಷ್ಣ ಗೌಡರ ಸಲಹೆ ನೀಡಿದರು. ಇಲ್ಲಿನ ಸಿ.ಟಿ.ಇ. ಸಂಸ್ಥೆಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಆಂಗ್ಲ ಮಾಧ್ಯಮ ಶಾಲೆ, ಚಿಕ್ಕೋಡಿ ವತಿಯಿಂದ 2025ಹಿ26್ಫೂ ಸಾಲಿನ “ಸ್ಪಂದನ” ದಿನ 2 ರ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಹಿರಿಯ ನಿರ್ದೇಶಕರಾದ ಎಸ್. ಬಿ. ಕುಲಕರ್ಣಿ ವಹಿಸಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯಗಳನ್ನು ನೀಡುವುದು ಅತ್ಯಂತ ಅಗತ್ಯವಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಸಿ.ಟಿ.ಇ. ಸಂಸ್ಥೆ ಇಂದು ಉನ್ನತ ಮಟ್ಟದ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಚಿಕ್ಕೋಡಿ ತಹಶಿಲ್ದಾರರಾದ ರಾಜಶೇಖರ ಆರ್. ಬುರ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ನೀಡುವಂತೆ ಶಿಕ್ಷಕರಿಗೂ ಪ್ರಶಸ್ತಿಗಳನ್ನು ನೀಡಬೇಕು. ಇದರಿಂದ ಶಿಕ್ಷಕರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆದು ಇನ್ನೂ ಉತ್ತಮ ಶಿಕ್ಷಣ ನೀಡಲು ಪ್ರೇರಣೆಯಾಗುತ್ತದೆ.
ಈ ಸಂಸ್ಥೆಯ ಆಡಳಿತ ಮಂಡಳಿಯು ಹಲವಾರು ಶಿಕ್ಷಕರನ್ನು ಗೌರವಿಸಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಿ.ಟಿ.ಇ. ಸಂಸ್ಥೆಯ ಯುವ ನಿರ್ದೇಶಕರಾದ ಕಿರಣ ಕುಲಕರ್ಣಿ. ಸಂಸ್ಥೆಯ ಉಪಾಧ್ಯಕ್ಷರಾದ ವಿ. ಎಸ್. ಮಾಂಜರೇಕರ, ಹಿರಿಯ ನಿರ್ದೇಶಕರಾದ ವಿ. ಪಿ. ಶೇಡಬಾಳ, ಯುವ ನಿರ್ದೇಶಕರಾದ ಓಂಕಾರ ಎಸ್. ಕುಲಕರ್ಣಿ, ಜಂಟಿ ಕಾರ್ಯದರ್ಶಿಗಳಾದ ಮಿಥುನ ಎಸ್. ದೇಶಪಾಂಡೆ ಹಾಗೂ ಸಂಕೇತ ವಿ. ಮಾಂಜರೇಕರ ಉಪಸ್ಥಿತರಿದ್ದರು. ಸಿ.ಬಿ.ಎಸ್.ಇ. ಶಾಲೆಯ ಪ್ರಾಂಶುಪಾಲರಾದ ಎ. ಪಿ. ಜೋಶಿ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಮಹಾಂತೇಶ ಎಸ್. ಮಲಾಬಾದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 