ದೆಹಲಿ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾದ ಕಿನ್ನಾಳ ಗ್ರಾ ಪಂ ಅಧ್ಯಕ್ಷೆ ಶ್ವೇತಾ ರಾಘವೇಂದ್ರ ಡಂಬಳ
ಕೊಪ್ಪಳ 19 : ಗಣರಾಜ್ಯೋತ್ಸವ ದಿನಾಚರಣೆ ಇದೆ ದಿನ 26ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಗಣರಾಜ್ಯೋತ್ಸವದ ವಿಶೇಷ ಅತಿಥಿಯಾಗಿ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಶ್ರೀಮತಿ ಶ್ವೇತಾ ರಾಘವೇಂದ್ರ ಡಂಬಳ ಆಯ್ಕೆಯಾಗಿದ್ದಾರೆದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಿನ್ನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಅವಕಾಶ ದೊರೆತಿರುವುದು ಹೆಮ್ಮೆಯ ವಿಷಯವಾಗಿದೆ, ಸುಮಾರು 750 ಜನ ವಿಶೇಷ ಪ್ರತಿನಿಧಿಯನ್ನು ಕೇಂದ್ರ ಸರ್ಕಾರ ಆಹ್ವಾನಿಸಿದ್ದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದು ತಿಳಿಸಿದ್ದಾರೆ ಅದರಂತೆ ನಮ್ಮ ರಾಜ್ಯದಿಂದ 12 ಜನರನ್ನು ಆಯ್ಕೆ ಮಾಡಲಾಗಿದ್ದು ಅದರಲ್ಲಿ ನಮ್ಮ ಕಿನ್ನಾಳಗ್ರಾಮ ಪಂಚಾಯಿತಿ ಅಧ್ಯಕ್ಷರು ಒಬ್ಬರು, ಇದು ನಮ್ಮ ಕೊಪ್ಪಳ ಜಿಲ್ಲೆಗೆ ಹೆಮ್ಮೆ ತರುವಂತ ವಿಷಯವಾಗಿದೆ ,ಈಗಾಗಲೇ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸದರಿ ಅವರನ್ನು ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ ಇವರು ನವ ದೆಹಲಿ ಯಲ್ಲಿ ಜರುಗುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲಿದ್ದಾರೆ ,ಅವರೊಂದಿಗೆ ಅವರ ಪತಿ ರಾಘವೇಂದ್ರ ಡಂಬಳ ಕೂಡ ಪಾಲ್ಗೊಳ್ಳುವವರುದೆಹಲಿಯ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ವೇತಾ ರಾಘವೇಂದ್ರ ಡಂಬಳ ಆಯ್ಕೆ ಕೊಂಡಿರುವುದಕ್ಕೆ ಕಿನ್ನಾಳ ಗ್ರಾಮದ ವಿವಿಧ ಸಂಘಟನೆಗಳು ಪಂಚಾಯಿತಿಯ ಜನ ಪ್ರತಿನಿಧಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,