ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನ: ಸಾಂಸ್ಕೃತಿಕ ಕಾರ್ಯಕ್ರಮಗಳು
Kittur Rani Chennamma's Birthday: Cultural Programs
ಬೆಳಗಾವಿ 12: 70ನೆಯ ಕರ್ನಾಟಕ ರಾಜ್ಯೋತ್ಸವ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮನವರ 247ನೇ ಜನ್ಮದಿನ ಪ್ರಯುಕ್ತ ಬೆಳಗಾವಿ ಕನ್ನಡ ಭವನದಲ್ಲಿ ದಿ. 14ರಂದು ಸಾ. 5ಗಂಟೆಗೆ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರಿ್ಡಸಲಾಗಿದೆ. ಅಧ್ಯಕ್ಷತೆಯನ್ನು ಕೆ.ಎಲ್.ಇ. ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆಯವರು ವಹಿಸಲಿದ್ದು, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ, ಕುಲಸಚಿವ ಡಾ. ಸಂತೋಷ ಕಾಮಗೌಡರವರು ಉದ್ಘಾಟಿಸಲಿದ್ದಾರೆ. ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎಸ್.ಎಂ. ಗಂಗಾಧರಯ್ಯನವರು ಉಪನ್ಯಾಸ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಸಿದ್ದು ಹುಲ್ಲೊಳ್ಳಿ ಹಾಗೂ ಮಾಜಿ ಜಿಲ್ಲಾಧ್ಯಕ್ಷರು ಕ.ಸಾ.ಪ. ಬೆಳಗಾವಿ ಡಾ. ಬಸವರಾಜ ಜಗಜಂಪಿ, ವಿಶೇಷ ಅವ್ಹಾನಿತರಾಗಿ ಕ.ಸಾ.ಪ., ಜಿಲ್ಲಾಧ್ಯಕ್ಷ ಮಂಗಳಾ ಮೆಟಗುಡ್ಡರವರು ಹಾಗೂ ನಂದಗಡ, ಆರಕ್ಷಕ ಉಪ ನೀರೀಕ್ಷಕ ಎಸ್.ಎಸ್.ಬಾದಾಮಿಯವರು ಆಗಮಿಸಲಿದ್ದು, ಡಾ. ರಾಜಕುಮಾರ, ಡಾ. ವಿಷ್ಣುವರ್ಧನ, ಅಂಬರೀಷ ಮುಂತಾದವರ ಕನ್ನಡ ನಾಡುನುಡಿಗೆ ಸಂಬಂಧಿಸಿದ ಹಾಡುಗಳನ್ನು ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಳ್ಳಿಚುಕ್ಕಿ ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ರಾಜೇಶ್ವರಿ ಹಿರೇಮಠರವರು ನಡೆಸಿ ಕೊಡುವವರಿದ್ದು ಎಲ್ಲ ಕನ್ನಡಪ್ರಿಯ ಮನಸ್ಸುಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ನೆಹರು ನಗರದಲ್ಲಿರುವ ಕನ್ನಡ ಭವನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 