ಕೊಪ್ಪಳ 09: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿಗಾಗಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಸಿರಗುಂಪಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟೈಲರಿಂಗ್ ತರಬೇತಿದಾರರಿಂದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಮತದಾನ ಜಾಗೃತಿಗಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಕುಷ್ಟಗಿ ತಾಲೂಕ ಸ್ವೀಪ್ ಸಮಿತಿಯಿಂದ ತಾಲೂಕಿನ ಸಿರಗುಂಪಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮುದಾಯ ಭವನದಲ್ಲಿ ಹೊಲಿಗೆ (ಟೈಲರಿಂಗ್) ತರಬೇತಿ ಪಡೆಯುತ್ತಿರುವ ಮಹಿಳೆಯರಿಗಾಗಿ ಮಂಗಳವಾರದಂದು ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕುಷ್ಟಗಿ ತಾಲೂಕ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ ಬಸಣ್ಣ ಅವರು ಮತದಾನ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಎ.ಪಿ.ಆರ್.ಒ. ಎನ್.ಎಫ್. ಬಡಿಗೇರ, ಐಸಿ ಸಂಯೋಜಕ ಚಂದ್ರಶೇಖರ ಹಿರೇಮಠ, ಸಿರಗುಂಪಿ ಪಿ.ಡಿ.ಒ ಅಮರೇಶ ಕರಡಿ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.