ಕೊಪ್ಪಳ 04: ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಮತದಾನ ಪ್ರಮಾಣವನ್ನು ಹೆಚ್ಚಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಕಸರತ್ತು ನಡೆಸುತ್ತಿರುವ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇದೀಗ ಕೊಪ್ಪಳ ಜಿಲ್ಲೆಯಲ್ಲಿ ಸಕರ್ಾರಿ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನೀಡುವ ಟಿಕೇಟ್ನಲ್ಲೂ ಮತದಾನದ ಸಂದೇಶ ನೀಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ.
ಏಪ್ರಿಲ್ 23 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜರುಗುವ ಮತದಾನದಲ್ಲಿ ಎಲ್ಲ ಅರ್ಹ ಮತದಾರರು ತಪ್ಪದೇ ಭಾಗವಹಿಸಿ ಎಲ್ಲರೂ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕೆನ್ನುವುದು ಚುನಾವಣಾ ಆಯೋಗದ ಆಶಯವಾಗಿದೆ. ಇದಕ್ಕಾಗಿ ಸ್ವೀಪ್ ಸಮಿತಿಯ ಮೂಲಕ ಹಲವಾರು ಮತದಾರರ ಜಾಗೃತಿಯ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ.
ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಇಲಾಖೆಗಳು, ಪಂಚಾಯಿತಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ, ಸಂಸ್ಥೆಗಳು ಸಹ ಕೈಜೋಡಿಸಿ ಮಾನವ ಸರಪಳಿ, ಬೈಕ್ ರ್ಯಾಲಿ, ಪ್ರತಿಜ್ಞಾ ವಿಧಿ ಸ್ವೀಕಾರ, ಮತಯಂತ್ರಗಳ ಪ್ರಾತ್ಯಾಕ್ಷಿತೆ ಹೀಗೆ ಹಲವು ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕೊಪ್ಪಳ ಕೆ.ಎಸ್.ಆರ್.ಟಿ.ಸಿ. ಜಿಲ್ಲಾ ಘಟಕವು ತಮ್ಮ ಸಂಸ್ಥೆಯ ಎಲ್ಲಾ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನೀಡುವ ಟಿಕೇಟ್ನಲ್ಲೂ ಮತದಾನದ ಸಂದೇಶ ನೀಡುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದೆ.