ಕೊಪ್ಪಳ : ಗೃಹ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಬಿಜೆಪಿ ಪ್ರತಿಭಟನೆ

ಲೋಕದರ್ಶನ ವರದಿ

ಕೊಪ್ಪಳ 06: ಜಿಲ್ಲಾ ಬಿಜೆಪಿಯಿಂದ ರಾಜ್ಯದ ಗೃಹ ಸಚಿವ ಎಂ.ಬಿ.ಪಾಟೀಲ್ರ ದಬ್ಬಾಳಿಕೆ ನೀತಿ, ಅಭಿವ್ಯಕ್ತಿ ಸ್ವಾತಂತ್ರ್ಯಹರಣ ಮತ್ತು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಖಂಡಿಸಿ ಸೋಮವಾರದಂದು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಪಂಚಾಯತಿ ಸದಸ್ಯ ಗವಿಸಿದ್ದಪ್ಪ ಕರಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಚಂದ್ರಶೇಖರ ಕವಲೂರು, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ತೋಟಪ್ಪ ಕಾಮನೂರು, ಬಿಜೆಪಿ ಮುಖಂಡರಾದ ಬಸವರಾಜ್ ಭೋವಿ, ಕಳಕಪ್ಪ ಜಾಧವ್, ಗಣೇಶ ಹೊರತಟ್ನಾಳ್, ಬಿ.ಗಿರೀಶಾನಂದ, ಯುವ ಮುಖಂಡರಾದ ದೇವರಾಜ್ ಹಾಲಸಮುದ್ರ, ಶ್ರೀನಿವಾಸ ಪೂಜಾರ್ ಗಿಣಿಗೇರಾ, ನಗರ ಘಟಕದ ಅಧ್ಯಕ್ಷ ಸುನೀಲ್ಕುಮಾರ ಹೆಸರೂರು,ಮಲ್ಲಪ್ಪ ಬೇಲೇರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ವಹಿಸಿದ್ದರು.