ಕೊಪ್ಪಳ : ಭಗವಾನ ಮಹಾವೀರ ಜಯಂತಿ: ಜಿಲ್ಲಾಡಳಿತದಿಂದ ಭಕ್ತಿ ನಮನ
ಕೊಪ್ಪಳ 19: ಭಗವಾನ ಮಹಾವೀರ ಜಯಂತಿಯ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ ಮಹಾವೀರರವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಭಗವಾನ ಮಹಾವೀರ ಅವರ ಜಯಂತಿಯನ್ನು ಬುಧವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಕೃಷ್ಣಮೂತರ್ಿ ದೇಸಾಯಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಾನ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು. ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 