ಕೊಪ್ಪಳ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಭಕ್ತಿ ನಮನ
ಕೊಪ್ಪಳ 14: ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೆಅಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ-2019 ರ ಹಿನ್ನೆಲೆ ನೀತಿ ಸಂಹಿತೆಯ ಕಾರಣದಿಂದಾಗಿ
ಜಿಲ್ಲಾಡಳಿತ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಾನುವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕ ಬಿ. ಕಲ್ಲೇಶ, ಜಿಲ್ಲಾ ವಾತರ್ಾಧಿಕಾರಿ ಬಿ. ಧನಂಜಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು.
ಪುತ್ಥಳಿಗೆ ಮಾಲಾರ್ಪಣೆ: ಬಾಬಾ ಸಾಹೇಬರವರ ಜನ್ಮ ದಿನದ ಅಂಗವಾಗಿ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ನಗರದಲ್ಲಿರುವ ಅಂಬೇಡ್ಕರ್ರವರ ಪುತ್ಥಳಿಗೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಕೆ. ಸುಕುಮಾರು ಅವರಿಂದ ಮಾಲಾರ್ಪಣೆ ಮಾಡಲಾಯಿತು. ಅಲ್ಲದೇ ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೆಶಕ ಬಿ. ಕಲ್ಲೇಶ ಸೇರಿದಂತೆ ಹಲವರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದು, ಅಂಬೇಡ್ಕರ್ರವರ ಪುತ್ಥಳಿ ಮುಂದೆ ಕ್ಯಾಂಡಲ್ ಹಚ್ಚಿ, ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ ಅಂಬೇಡ್ಕರ್ರವರಿಗೆ ಗೌರವ ನಮನವನ್ನು ಸಲ್ಲಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 