ಕೊಪ್ಪಳ: ಇ.ವಿ.ಎಂ. ವಿ.ವಿ. ಪ್ಯಾಟ್ ಮಾಹಿತಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ

ಕೊಪ್ಪಳ 14: ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ಇ.ವಿ.ಎಂ. ಹಾಗೂ ವಿ.ವಿ. ಪ್ಯಾಟ್ ಯಂತ್ರಗಳ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಾಗೂ ಶಿಕ್ಷಕರ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. 

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ವಾಷರ್ಿಕ ಪರೀಕ್ಷೆಗಳು ನಡೆಸುವ ಸಂಬಂಧ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ನಂತರ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯ ಶಿಕ್ಷಕರಿಗೆ ಇ.ವಿ.ಎಂ. ಹಾಗೂ ವಿ.ವಿ. ಪ್ಯಾಟ್ ಯಂತ್ರಗಳ ಕುರಿತು ಪ್ರಾತ್ಯಕ್ಷಿಕವಾಗಿ ಮಾಹಿತಿಯನ್ನು ನೀಡಲಾಯಿತು. 

ಮತ ಖಾತ್ರಿಗಾಗಿ ಬಳಕೆ ಮಾಡಲಾದ ಮತದಾನ ಖಾತ್ರಿಯಂತ್ರ ವಿ.ವಿ.ಪ್ಯಾಟ್ ಕಾರ್ಯ ನಿರ್ವಹಣೆ ಕುರಿತು ಸೆಕ್ಟರ್ ಅಧಿಕಾರಿ ಪ್ರಭಾಸ ಅವರು ಎಲ್ಲಾ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದರು.  ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕಿ ಉಮಾದೇವಿ ಸೊನ್ನದ ಹಾಗೂ ಕೆಲ ಅಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರು ಪ್ರಾಯೋಗಿಕವಾಗಿ ಮತದಾನ ಮಾಡಿ, ತಾವು ಹಾಕಿರುವ ಮತವನ್ನು ವಿ.ವಿ. ಪ್ಯಾಟ್ ಮೂಲಕ ಖಾತ್ರಿ ಪಡಿಸಿಕೊಂಡರು.  

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪಯ್ಯ, ಜಿಲ್ಲಾ ಖಜಾನೆ ಅಧಿಕಾರಿ ಹರಿನಾಥ ಬಾಬು, ಎಸ್.ಎಸ್.ಎಲ್.ಸಿ. ಪರೀಕ್ಷೆ ಜಿಲ್ಲಾ ನೋಡಲ್ ಅಧಿಕಾರಿ ಸುಜಾತ, ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ವರಿವೀಕ್ಷಕ ಪತ್ತಾರ್ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.