ಕೊಪ್ಪಳ 14: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾ. 21 ರಿಂದ ಏಪ್ರೀಲ್. 04 ರವರೆಗೆ ನಡೆಯಲಿದ್ದು, ಯಾವುದೇ ಗೊಂದಲಗಳಿಗೆ ಅವಕಾಶ ಕೊಡದೆ, ಶಾಂತಿ ಸುವ್ಯೆವಸ್ಥಿತವಾಗಿ ಪರೀಕ್ಷೆ ನಡೆಸಿ ಎಂದು ಕೊಪ್ಪಳ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ನಡೆಸುವ ಸಂಬಂಧ ಜಿಲ್ಲಾ ಪಂಚಾಯತ್ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾ. 21 ರಿಂದ ಏಪ್ರೀಲ್ 04 ರವರೆಗೆ ನಡೆಯಲಿದ್ದು, ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು ಜಿಲ್ಲೆಯ 20,600 ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗುತ್ತಿದ್ದು ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ, ಸುಗಮ ಹಾಗೂ ಶಾಂತಿಯುತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಾಗುವುದರಿಂದ ಮೊದಲುಗೊಂಡು, ವಿತರಣೆಯಾಗುವವರೆಗೂ ಎಲ್ಲವನ್ನೂ ವಿಡಿಯೋ ಚಿತ್ರೀಕರಣ ಆಗಬೇಕು. ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿ ಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪ್ರತಿ ಕೇಂದ್ರಕ್ಕೆ ಕಡ್ಡಾಯವಾಗಿ ಒಬ್ಬರು ಮಹಿಳಾ ಪೊಲೀಸ್ ಪೇದೆಯನ್ನು ನಿಯೋಜಿಸಬೇಕು. ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ. ಬೋಡರ್್ ನೀಡಿರುವ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಅಕ್ರಮಗಳು ಆದರೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊಣೆಯಾಗಿಸಿ, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಆರ್.ಎಸ್. ಪೆದ್ದಪಯ್ಯ ಅವರು ಎಚ್ಚರಿಕೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರಾದ ಉಮಾದೇವಿ ಸೊನ್ನದ್ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾ. 21 ರಿಂದ ಏಪ್ರೀಲ್. 04 ರವರೆಗೆ ನಡೆಯಲಿದ್ದು, ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಜಿಲ್ಲೆಯ 20,600 ವಿದ್ಯಾರ್ಥಿ ಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮುಖ್ಯ ಅಧೀಕ್ಷಕರುಗಳನ್ನು ಹಾಗೂ ಪ್ರಶ್ನೆ ಪತ್ರಿಕೆ ಅಭಿರಕ್ಷಕರನ್ನು ನೇಮಕ ಮಾಡಲಾಗಿದೆ. 28 ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿ ಅಧೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಕೊಪ್ಪಳದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಭಾಗ್ಯನಗರದ ಸರ್ಕಾರ ಪದವಿ ಪೂರ್ವ ಕಾಲೇಜು ಮತ್ತು ನ್ಯಾಷನಲ್ ಪ್ರೌಢ ಶಾಲೆ ಸೇರಿ ಖಾಸಗಿ ಅಭ್ಯರ್ ಗಳಿಗಾಗಿ ಜಿಲ್ಲೆಯಲ್ಲಿ 03 ಸೂಕ್ಷ್ಮ ಪರೀಕ್ಷಾ ಕೇಂದ್ರಗಳಿವೆ. ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಜಿಲ್ಲೆಯಲ್ಲಿ ಯಾವು ಇಲ್ಲ. ತಾಲೂಕವಾರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 24 ಮಾರ್ಗಗಳಿದ್ದು, 24 ವಾಹನಗಳು ಬೇಕಾಗಿವೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನೆ ಅಧಿಕಾರಿ ಹರಿನಾಥ ಬಾಬು, ಎಸ್.ಎಸ್.ಎಲ್.ಸಿ. ಪರೀಕ್ಷೆ ಜಿಲ್ಲಾ ನೋಡಲ್ ಅಧಿಕಾರಿ ಸುಜಾತ, ಕೊಪ್ಪಳ ಸಮನ್ವಯಾಧಿಕಾರಿ ಎಸ್.ಎಂ. ಅರವಿಂದಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ, ಗಂಗಾವತಿಯ ಸೋಮಶೇಖರಗೌಡ, ಕುಷ್ಟಗಿಯ ಚನ್ನಬಸಪ್ಪ ಮಗ್ಗದ್, ಯಲುಬುರ್ಗ ಶರಣಪ್ಪ ವಟಗಲ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ಮತ್ತಿತರರು ಉಪಸ್ಥಿತರಿದ್ದರು.