ಕೊಪ್ಪಳ 19: ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್. 21 ರಿಂದ 28 ರವರೆಗೆ ನಡೆಯಲಿದ್ದು, ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು (ಜೂ.18ರಂದು) ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್. 21 ರಿಂದ 28 ರವರೆಗೆ ನಡೆಯಲಿದ್ದು, ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ, ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಬೇಕು. ಈ ನಿಟ್ಟಿನಲ್ಲಿ ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಾಗುವುದರಿಂದ ಮೊದಲುಗೊಂಡು, ವಿತರಣೆಯಾಗುವವರೆಗೂ ಎಲ್ಲವನ್ನೂ ವಿಡಿಯೋ ಚಿತ್ರೀಕರಣ ಆಗಬೇಕು. ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾಗರ್ಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾಥರ್ಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಸುತ್ತ ನಿಷೇಧಾಜ್ಞೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಪರೀಕ್ಷೆ ಮಂಡಳಿಯ ನಿಯಮ ಹಾಗೂ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ಅಕ್ರಮಗಳು ಆದರೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಅಧಿಕಾರಿಗಳು, ಸಿಬ್ಬಂದಿಗಳನ್ನು ಹೊಣೆಯಾಗಿಸಿ, ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಉಪನಿದರ್ೇಶಕರಾದ ಎ. ಶ್ಯಾಮಸುಂದರ ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಜೂನ್. 21 ರಿಂದ 28 ರವರೆಗೆ ಜರುಗಲಿದ್ದು, ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. 13 ಪರೀಕ್ಷಾ ಕೇಂದ್ರಗಳಲ್ಲಿ 02 ಖಾಸಗಿ ಕೇಂದ್ರಗಳಿವೆ. ಜಿಲ್ಲೆಯ 4445 ವಿದ್ಯಾಥರ್ಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ವಿವರದನ್ವಯ ಜಿಲ್ಲೆಯ ಗಂಗಾವತಿ ತಾಲೂಕಿನ ಲಯನ್ಸ್ ಪ್ರೌಢ ಶಾಲೆ, ಎಂ.ಎನ್.ಎಂ. ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಬೆಥಲ್ ಆಂಗ್ಲ ಪ್ರೌಢ ಶಾಲೆ, ಕೊಟ್ಟುರೇಶ್ವರ ಪ.ಪೂ ಕಾಲೇಜು, ಕೊಪ್ಪಳ ತಾಲೂಕಿನ ಬಾಲಕರ ಸಕರ್ಾರಿ ಪ.ಪೂ ಕಾಲೇಜು, ಗವಿಸಿದ್ದೇಶ್ವರ ಪ್ರೌಢ ಶಾಲೆ, ಬಾಲಕಿಯರ ಸರಕಾರಿ ಪ.ಪೂ ಕಾಲೇಜು, ಎಸ್.ಎಫ್.ಎಸ್ ಪ್ರೌಢ ಶಾಲೆ, ಸ್ವಾಮಿ ವಿವೇಕಾನಂದ ಪ್ರೌಢ ಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜು ಭಾಗ್ಯನಗರ, ಕುಷ್ಟಗಿ ತಾಲೂಕಿನ ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜು, ಯಲಬುಗರ್ಾ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಮಂಜುನಾಥ ಪ್ರೌಢ ಶಾಲೆ, ಈ ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯಲಿವೆ ಎಂದು ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಜಿಲ್ಲಾ ನೋಡಲ್ ಅಧಿಕಾರಿ ಸುಜಾತಾ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಶೋಭಾ ಬಾಗೇವಾಡಿ, ವಿಷಯ ಪರಿವೀಕ್ಷಕ ನಿಲಕಂಠಪ್ಪ ಕಂಬಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ನೋಡಲ್ ಅಧಿಕಾರಿಗಳು, 13 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆಗಳ ಪಾಲಕರು ಮತ್ತಿತರರು ಉಪಸ್ಥಿತರಿದ್ದರು.