ಕೊಪ್ಪಳ 09: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿಗಳಿಗೆ ಕುಷ್ಟಗಿ ಪಟ್ಟಣದ ಪದವಿ ಕಾಲೇಜಿನಲ್ಲಿ ಮಂಗಳವಾರದಂದು ಹಮ್ಮಿಕೊಳ್ಳಲಾದ ತರಬೇತಿ ಕಾಯರ್ಾಗಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಭೇಟಿ ನೀಡಿದರು.
ಚುನಾವಣಾ ಕರ್ತವ್ಯಕ್ಕೆ ನೇಮಿಸಲ್ಪಟ್ಟಿರುವವರು ತುಂಬಾ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ತಮ್ಮ ಕರ್ತವ್ಯದಲ್ಲಿ ಯಾವುದೇ ನಿರ್ಲಕ್ಷ್ಯತನ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ತಮಗೆ ನೀಡಿರುವ ಕೆಲಸವನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ರವರು ಸೂಚನೆ ನೀಡಿದರು. ಕೊಪ್ಪಳ ತಹಶೀಲ್ದಾರ ಜೆ.ಬಿ. ಮಜ್ಗಿ ಸೇರಿದಂತೆ ಕೆಲ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ ಮತ ಯಂತ್ರ ಇವಿಎಂ ಹಾಗೂ ಮತ ಖಾತ್ರಿ ಯಂತ್ರ ವಿವಿ ಪ್ಯಾಟ್ ಕಾರ್ಯದ ಕುರಿತು ಸಿಬ್ಬಂದಿಗಳಿಗೆ ಪ್ರಾತ್ಯಕ್ಷಿತವಾಗಿ ಮಾಹಿತಿಯನ್ನು ನೀಡಲಾಯಿತು.