ಕೊಪ್ಪಳ : ಸಮರ್ಪಕ ನೀರು ಸರಬರಾಜು ಮಾಡುವಂತೆ ವಿಶ್ವನಾಥ್ರೆಡ್ಡಿ ತಾಕೀತು
ಕೊಪ್ಪಳ 13: ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ್ರೆಡ್ಡಿ ಅವರು ಅಧಿಕಾರಿಗಳಿಗೆ ತಾಕೀತು ನೀಡಿದರು.
ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಕುಡಿಯುವ ನೀರಿನ ಸರಬರಾಜು ಬಗ್ಗೆ ಗ್ರಾಮೀಣ ಕುಡಿಯುವ ನೀರು ಯೋಜನೆ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸುಮಾರು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ತುಂಬಾ ಇದೆ. ಇದರಿಂದ ಜನರ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಈ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಮೂಲ ಸೌಕರ್ಯ ಒದಗಿಸಬೇಕು. ನಾವು ಹಳ್ಳಿಗಳಲ್ಲಿ ದಿನನಿತ್ಯ ಒಡಾಡುವ ಸಂದರ್ಭದಲ್ಲಿ ಜನರು ನಮ್ಮ ಮುಂದೆ ತಮ್ಮ ಸಮಸ್ಯೆ ತೊಡಗಿಕೊಂಡಗಾ ಜನರೊಂದಿಗೆ ಭರವಸೆ ನೀಡುವುದು ತುಂಬಾ ಕಷ್ಟವಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಜನರ ಸಮಸ್ಯೆಗೆ ಸಂಧಿಸುವ ಮನೋಭಾವನ್ನು ರೂಢಿ ಸಿಕೊಳ್ಳಬೇಕು. ಸಮಸ್ಯಾತ್ಮಕ ಗ್ರಾಮಗಳಲ್ಲಿ ಮಾಹಿತಿ ಪಡೆದು ಸಮಸ್ಯೆಯನ್ನು ಕೂಡಲೇ ಬಗೆಹರಿಸಿ. ಅವಶ್ಯ ಬಿದ್ದರೆ ಅಂತಹ ಸಂದರ್ಭ ಬಂದಲ್ಲಿ ನಾವು ನಿವು ಜೊತೆಗೆ ಹೋಗೋಣ. ನಮ್ಮ ಜನರಿಗೆ ಅನುಕೂಲವಾಗುವ ಕುಷ್ಟಗಿ ಮತ್ತು ಯಲಬುಗರ್ಾ ತಾಲೂಕಿನ ಬಹುಜನ ಕುಡಿಯುವ ನೀರಿನ ಯೋಜನೆ ಬಗ್ಗೆ ಚಚರ್ಿಸಿ ಅಗತ್ಯವಾದಲ್ಲಿ ವ್ಯೆಯಕ್ತಿಕವಾಗಿ ಆ ಭಾಗದ ಸಚಿವರ ಶಾಸಕರ ಜೊತೆಗೆ ಚಚರ್ಿಸಲು ಮುಂದಾಗುತ್ತೆನೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ್ರೆಡ್ಡಿ ಅವರು ಹೇಳಿದರು.
ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಎನ್.ಕೆ. ತೊರವಿ, ಎಇಇ ತಿರುಕನಗೌಡ, ಎಇ ಮುರಳೀಧರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 